ವಾಷಿಂಗ್ಟನ್: ಅಮೆರಿಕದ (America) ಮಿಯಾಮಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Miami International Airport) ಲ್ಯಾಂಡಿಂಗ್ ವೇಳೆ ಅಮೆಜಾನ್ ಪ್ರೈಮ್ ಏರ್ ಕಾರ್ಗೋ ಜೆಟ್ (Amazon Cargo Jet) ರನ್‌ವೇಯಿಂದ ಜಾರಿ ಪಾರ್ಕ್ ಮಾಡಿದ್ದ ವಾಹನಗಳಿಗೆ ಡಿಕ್ಕಿಯಾಗಿದೆ. ಈ ಅವಘಡದಲ್ಲಿ ಕನಿಷ್ಠ ಐವರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
ವಿಮಾನವು ಭಾನುವಾರ ಮಧ್ಯಾಹ್ನ 2 ಗಂಟೆಯ ಸುಮಾರಿಗೆ ET (1800 GMT) ಲ್ಯಾಂಡ್ ಆಗಿತ್ತು. ಈ ವೇಳೆ ರನ್‌ವೇಯಿಂದ ಜಾರಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದೆ. ಈ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ದಟ್ಟವಾದ ಹೊಗೆ ಏಳುವುದು ಸೆರೆಯಾಗಿದೆ. ಇದನ್ನೂ ಓದಿ: ಲಂಡನ್‌ಗೆ ಹೊರಟಿದ್ದ ವಿಮಾನದಲ್ಲಿ ತಾಂತ್ರಿಕ ದೋಷ – ತುಮಕೂರು ಬಳಿ ಗಿರಕಿ ಹೊಡೆದು ಬೆಂಗ್ಳೂರಿಗೆ ವಾಪಸ್
ಬೋಯಿಂಗ್ 767-300 ವಿಮಾನ ಇದಾಗಿದ್ದು, ಪೋರ್ಟೊ ರಿಕೊದ ಸ್ಯಾನ್ ಜುವಾನ್‌ನಿಂದ ಮಿಯಾಮಿಗೆ ಆಗಮಿಸಿತ್ತು. ವಿಮಾನ ಅಪಘಾತದ ನಂತರ ಎಲ್ಲಾ ರನ್‌ವೇಗಳು ಮತ್ತು ಟ್ಯಾಕ್ಸಿವೇಗಳನ್ನು ಕೆಲಕಾಲ ಮುಚ್ಚಲಾಗಿತ್ತು.
ಕೂಡಲೇ ರಕ್ಷಣಾ ತಂಡಗಳು ವಿಮಾನಕ್ಕೆ ಹೊತ್ತಿದ್ದ ಬೆಂಕಿಯನ್ನು ಆರಿಸಿದ್ದಾರೆ. ಫೆಡರಲ್ ಏವಿಯೇಷನ್ ಅಡ್ಮಿನಿಸ್ಟ್ರೇಷನ್ ಅಪಘಾತದ ಬಗ್ಗೆ ತನಿಖೆ ನಡೆಸುವುದಾಗಿ ಹೇಳಿದೆ. ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿ ಸಹ ಈ ಅಪಘಾತದ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ.
ವಿಮಾನ ಅಪಘಾತದಲ್ಲಿ ತೊಂದರೆಗೊಳಗಾದವರ ನೆರವಿಗೆ ಕಂಪನಿಯು ಸಾಧ್ಯವಿರುವ ಎಲ್ಲ ಪ್ರಯತ್ನವನ್ನು ಮಾಡುತ್ತಿದೆ ಎಂದು ಅಮೇಜಾನ್ ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ದೋಹಾದಿಂದ ಬೆಂಗಳೂರಿಗೆ ಬರುತ್ತಿದ್ದ ಇಂಡಿಗೋ ವಿಮಾನದ ಪೈಲಟ್ ಅಸ್ವಸ್ಥ – ಮಸ್ಕತ್‌ನಲ್ಲಿ ತುರ್ತು ಭೂಸ್ಪರ್ಶ
