- ಬಂದ್ ಬೆಂಬಲ ಸೂಚಿಸುವಂತೆ ಹೋರಾಟಗಾರರಿಂದ ಮನವಿ
ಯಾದಗಿರಿ: ಜಿಲ್ಲೆಯ ಬರದ ಸಂಕಷ್ಟವನ್ನು ಸರ್ಕಾರದ ಗಮನಕ್ಕೆ ತರಲು ಯಾದಗಿರಿ (Yadagiri) ಜಿಲ್ಲಾ ಬಂದ್ಗೆ ಸರ್ವ ಸಂಘಟನೆಗಳು ಕರೆ ನೀಡಿವೆ.
ಯಾದಗಿರಿಯ 5 ತಾಲೂಕುಗಳನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಆಗ್ರಹಿಸಿ ಸರ್ವ ಸಂಘಟನೆಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಈ ಬಂದ್ಗೆ ಕರೆ ನೀಡಲಾಗಿದೆ. ಬರಪೀಡಿತ ತಾಲೂಕುಗಳ ಪಟ್ಟಿಯಿಂದ ಯಾದಗಿರಿ ಜಿಲ್ಲೆಗೆ ಅನ್ಯಾಯವಾಗಿದ್ದು, ಯಾದಗಿರಿ ಜಿಲ್ಲೆಯನ್ನು ತಕ್ಷಣ ಬರಪೀಡಿತ ಜಿಲ್ಲೆ ಎಂದು ಘೋಷಿಸುವಂತೆ ಒತ್ತಾಯಿಸಲಾಗಿದೆ. ಈ ವೇಳೆ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: SIR ನೋಟಿಸ್ – ವಿಚಾರಣೆಗೆ ತೆರಳುವಾಗ ಈ ದಾಖಲೆಗಳು ನಿಮ್ಮ ಬಳಿ ಇರಲಿ
ಅನ್ನದಾತರಿಗಾಗಿ ಬಂದ್ಗೆ ಕರೆ ನೀಡಲಾಗಿದ್ದು, ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ಹೋರಾಟಕ್ಕೆ ಬೆಂಬಲಿಸುವಂತೆ ಮನವಿ ಮಾಡಲಾಗಿದೆ. ಯಾದಗಿರಿ ನಗರದ ಕೇಂದ್ರ ಬಸ್ ನಿಲ್ದಾಣ, ಸುಭಾಷ್ ಸರ್ಕಲ್ ಸೇರಿ ಹಲವು ಕಡೆ ಬಂದ್ಗೆ ಬೆಂಬಲಿಸುವಂತೆ ಹೋರಾಟಗಾರರು ಮನವಿ ಮಾಡಿದ್ದಾರೆ.
ಹೋರಾಟಗಾರರ ಮನವಿಗೆ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಸ್ಪಂದಿಸುತ್ತಿದ್ದು, ಬಂದ್ಗೆ ಬೆಂಬಲ ಸೂಚಿಸಿ ವ್ಯಾಪಾರಸ್ಥರು ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡುತ್ತಿದ್ದಾರೆ. ಬರದ ಸಂಕಷ್ಟಕ್ಕೆ ಸರ್ಕಾರದ ಗಮನ ಸೆಳೆಯಲು ಯಾದಗಿರಿ ಜನತೆ ಒಗ್ಗಟ್ಟಾಗಿದ್ದು, ಬಂದ್ ಯಶಸ್ವಿಗೊಳಿಸಲು ಹೋರಾಟಗಾರು ನಿರಂತರವಾಗಿ ಮನವಿ ಮಾಡುತ್ತಿದ್ದಾರೆ. ಇದನ್ನೂ ಓದಿ: ದಾವಣಗೆರೆಯಲ್ಲಿ ಎರಡು ಗುಂಪಿನ ಮಧ್ಯೆ ತಲ್ವಾರ್ ಕಾಳಗ – ಐವರಿಗೆ ಗಂಭೀರ ಗಾಯ
