ಬೆಂಗಳೂರು: ಪಿಒಪಿ ಗಣೇಶನ ವಿರುದ್ಧ ರೈಡ್ ಬೆನ್ನಲ್ಲೇ ಇದೀಗ ಪಟಾಕಿ ಬಳಕೆಗೂ ಸರ್ಕಾರ ಹೊಸ ರೂಲ್ಸ್ ಜಾರಿ ಮಾಡುತ್ತಿದೆ.
ಹಬ್ಬದ ಸಮಯದಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ಬಳಸುವಂತೆ ಸೂಚಿಸಲಾಗಿದ್ದು, ಹಸಿರು ಪಟಾಕಿ ( Firecracker Rules) ಹೊರತುಪಡಿಸಿ ಮಾಲಿನ್ಯ ಉಂಟುಮಾಡುವ ಪಟಾಕಿಗಳನ್ನು ಮಾರಾಟ ಮಾಡಿದರೆ ಕ್ರಿಮಿನಲ್ ಕೇಸ್ ಹಾಕುವುದಾಗಿ ಎಚ್ಚರಿಕೆ ನೀಡಲಾಗಿದೆ.
ಪಟಾಕಿ ಅಂಗಡಿ ಮಾಲೀಕರು ಕೇವಲ ಹಸಿರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡುತ್ತೇವೆಂದು ಮುಚ್ಚಳಿಕೆ ಬರೆದುಕೊಡಬೇಕಾಗುತ್ತದೆ ಎಂದು ಪರಿಸರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.ಇದನ್ನೂ ಓದಿ: ಮಹಿಳೆಯರ ವಿರುದ್ಧ ಆಕ್ಷೇಪಾರ್ಹ ಪದ ಬಳಸಿದ್ರೆ ಹುಷಾರ್ – ತ್ರಿಷಾ ಟೀಕಿಸಿದವರಿಗೆ ಕಾನೂನು ಕ್ರಮದ ಎಚ್ಚರಿಕೆ ನೀಡಿದ ವಿಜಯ್
