ರಾಮನಗರ: ಏಕಾಏಕಿ ಬೈಕ್ (Bike) ಅಡ್ಡಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ (Transformer) ಡಿಕ್ಕಿ ಹೊಡೆದ ಘಟನೆ ಕನಕಪುರ (Kanakapura) ಟೌನ್ನ ವಾಣಿ ಟಾಕೀಸ್ ಬಳಿ ತಡರಾತ್ರಿ ನಡೆದಿದೆ.
ಅದೃಷ್ಟವಶಾತ್ ಕಾರು ಚಾಲಕ ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ತಡರಾತ್ರಿ ಕನಕಪುರ-ಬೆಂಗಳೂರು ರಸ್ತೆಯಲ್ಲಿ ಕಾರು ಚಲಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಸಂದರ್ಭದಲ್ಲಿ ಧಿಡೀರನೆ ಬೈಕ್ವೊಂದು ಅಡ್ಡ ಬಂದಿದ್ದು, ಬೈಕ್ ಸವಾರನನ್ನು ರಕ್ಷಿಸಲು ಹೋದ ಚಾಲಕ ಕಾರಿನ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯಲ್ಲಿದ್ದ ವಿದ್ಯುತ್ ಟ್ರಾನ್ಸ್ಫಾರ್ಮರ್ಗೆ ರಭಸವಾಗಿ ಡಿಕ್ಕಿ ಹೊಡೆದಿದ್ದಾನೆ. ಇದನ್ನೂ ಓದಿ: ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ಕೊಡಿ: ಸಂತೋಷ್ ಲಾಡ್ ಆಗ್ರಹ
ಡಿಕ್ಕಿಯ ಭರಕ್ಕೆ ವಿದ್ಯುತ್ ಕಂಬ ಜಖಂಗೊಂಡಿದ್ದು, ಶಾರ್ಟ್ ಸರ್ಕ್ಯೂಟ್ ಉಂಟಾಗಿದೆ. ಸದ್ಯ ಚಾಲಕ ಅದೃಷ್ಟವಶಾತ್ ದೊಡ್ಡ ಅನಾಹುತದಿಂದ ಬಚಾವಾಗಿದ್ದಾರೆ. ಕಾರು ಟ್ರಾನ್ಸ್ಫಾರ್ಮರ್ಗೆ ಡಿಕ್ಕಿ ಹೊಡೆಯುವ ಭಯಾನಕ ದೃಶ್ಯ ಹತ್ತಿರದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಕನಕಪುರ ಸಂಚಾರ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಸಮಾವೇಶಕ್ಕೆ ಆಪ್ತರ ಗೈರು: ಸಿದ್ದರಾಮಯ್ಯ ಆಪ್ತಕೂಟದಲ್ಲಿ ಬಿರುಕು?
