ಚಿಕ್ಕಮಗಳೂರು: ತುಂಗಾ ನದಿಗೆ (Tunga River) ಯುವಕನೊಬ್ಬ ಬಿದ್ದು ಸಾವನ್ನಪ್ಪಿದ ಘಟನೆ ಶೃಂಗೇರಿ (Sringeri) ತಾಲೂಕಿನ ಹಾಲಂದೂರು ಗ್ರಾಮದಲ್ಲಿ ನಡೆದಿದೆ.
ಪ್ರತೀಕ್ (30) ನದಿಗೆ ಬಿದ್ದು ಸಾವನ್ನಪ್ಪಿದ ದುರ್ದೈವಿ. ಪೋಟೋ ತೆಗೆಯಲು ಹೋದಾಗ ಜಾರಿ ನದಿಗೆ ಬಿದ್ದಿರೋ ಶಂಕೆ ವ್ಯಕ್ತವಾಗಿದೆ. ಮೃತದೇಹವನ್ನು ಈಶ್ವರ್ ಮಲ್ಪೆ ಹಾಗೂ ಅಗ್ನಿಶಾಮಕ ಸಿಬ್ಬಂದಿ ನದಿಯಿಂದ ಹೊರತೆಗೆದಿದ್ದಾರೆ. ಇದನ್ನೂ ಓದಿ: ಬೈ ಬೈ ಪಪ್ಪಾ ಎಂದು ಚೆನಾಬ್ ನದಿಗೆ ಜಿಗಿದ ಯುವತಿ – ವಿಡಿಯೋ ವೈರಲ್
ಈ ಸಂಬಂಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿಗೆ ಹಿಂಬದಿಯಿಂದ ಮತ್ತೊಂದು ಕಾರು ಡಿಕ್ಕಿ – ಮಹಿಳೆ ಸಾವು, ನಾಲ್ವರಿಗೆ ಗಾಯ
