ಹಾವೇರಿ: ಸದನದಲ್ಲಿ (Session) ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸುವುದು ನನ್ನ ಕರ್ತವ್ಯ ಎಂದು ನೂತನ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ (Saleem Ahmed) ಹೇಳಿದ್ದಾರೆ.
ಹಾವೇರಿ (Haveri) ಜಿಲ್ಲೆ ಸವಣೂರು ಪಟ್ಟಣದ ದೊಡ್ಡಹುಣಸೆಮಠಕ್ಕೆ ನೂತನ ವಿಧಾನ ಪರಿಷತ್ ಸಭಾಪತಿ ಸಲೀಂ ಅಹ್ಮದ್ ಭೇಟಿ ನೀಡಿ ಸ್ವಾಮೀಜಿಗಳ ಆರ್ಶಿವಾದ ಪಡೆದರು. ನಂತರ ಮಾತನಾಡಿದ ಅವರು, ಸದನದಲ್ಲಿ ಯಾವುದೇ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸುತ್ತೆನೆ. ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳ ಜನಪ್ರತಿನಿಧಿಯಾಗಿ ಕೆಲಸ ಮಾಡಿದ ಅನುಭವವಿದ್ದು, ಸಭಾಪತಿ ಹುದ್ದೆಯ ಗೌರವ ಕಾಪಾಡುವ ನಿಟ್ಟಿನಲ್ಲಿ ಪಕ್ಷಕ್ಕೆ ರಾಜೀನಾಮೆ ನೀಡಿದ್ದೇನೆ ಎಂದರು. ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಹೊನ್ನಾವರದಲ್ಲಿ ಪ್ರತಿಭಟನೆ; ಒಂದು ಲಕ್ಷ ಆಕ್ಷೇಪ ಪತ್ರ ಸಲ್ಲಿಕೆಗೆ ಸಿದ್ಧತೆ
ಇದೇ ತಿಂಗಳ 21, 22 ಹಾಗೂ 23ರಂದು ನಡೆಯಲಿರುವ ವಿಶೇಷ ಅಧಿವೇಶನದಲ್ಲಿ ರಾಜ್ಯದ ಬರ ಪರಿಸ್ಥಿತಿ, ರೈತರ ಸಮಸ್ಯೆಗಳು ಹಾಗೂ ಕಸ್ತೂರಿ ರಂಗನ್ ವರದಿ ಕುರಿತು ಸುದೀರ್ಘ ಚರ್ಚೆ ನಡೆಯಲಿದ್ದು, ಸದನ ಸುಸೂತ್ರವಾಗಿ ನಡೆಯಲು ಎಲ್ಲಾ ಪಕ್ಷಗಳ ನಾಯಕರ ಸಭೆಯನ್ನು ಕರೆಯಲಾಗಿದೆ. ಸದನದಲ್ಲಿ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸುವುದು ನನ್ನ ಕರ್ತವ್ಯ. ಆಡಳಿತ ಮತ್ತು ವಿರೋಧ ಪಕ್ಷಗಳನ್ನು ಸಮಾನವಾಗಿ ಕಂಡು ಸದನವನ್ನು ನಡೆಸಲಾಗುವುದು. ರಾಜ್ಯದ ವಿವಿಧ ಭಾಗಗಳಲ್ಲಿ ಎದುರಾಗಿರುವ ಬರ ಪರಿಸ್ಥಿತಿ ಹಾಗೂ ರೈತರ ಸಮಸ್ಯೆಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು. ವಿಧಾನ ಪರಿಷತ್ತಿನ ಗರಿಮೆಯನ್ನು ಉಳಿಸಿಕೊಳ್ಳಲು ಎಲ್ಲ ಸದಸ್ಯರ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಎಂಜಿನ್ ಆಯಿಲ್ ದಿಢೀರ್ ಕುಸಿತ; ಅಬುಧಾಬಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯೆ ಕೊಚ್ಚಿಗೆ ವಾಪಸ್
