– ಕಟ್ಟಡ ಮಾಲೀಕ ರಾಜಸ್ಥಾನದಲ್ಲಿ ಅರೆಸ್ಟ್
ನವದೆಹಲಿ: ದಕ್ಷಿಣ-ಪಶ್ಚಿಮ ದೆಹಲಿಯ (Delhi) ಸತ್ಯನಿಕೇತನದಲ್ಲಿ (Satya Niketan) ಭಾನುವಾರ ಐದು ಅಂತಸ್ತಿನ ಹಳೆಯ ಕಟ್ಟಡ ಕುಸಿದು (Building Collapse) ಏಳು ಮಂದಿ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ದೆಹಲಿ ಮಹಾನಗರ ಪಾಲಿಕೆ (Municipal Corporation of Delhi) ಐವರು ಅಧಿಕಾರಿಗಳನ್ನು ಅಮಾನತುಗೊಳಿಸಿದೆ.
ಸೌತ್ ಝೋನ್‌ನ ಡೆಪ್ಯುಟಿ ಕಮಿಷನರ್ ರಾಕೇಶ್ ಕುಮಾರ್, ಸೂಪರಿಂಟೆಂಡಿಂಗ್ ಎಂಜಿನಿಯರ್ ರಣವೀರ್ ಸಿಂಗ್, ಬಿಲ್ಡಿಂಗ್ ವಿಭಾಗದ ಎಕ್ಸಿಕ್ಯೂಟಿವ್ ಎಂಜಿನಿಯರ್ ಲಲಿತ್ ಕುಮಾರ್ ಗೋಯಲ್, ಅಸಿಸ್ಟೆಂಟ್ ಎಂಜಿನಿಯರ್ ಸುನಿಲ್ ಚೌಹಾಣ್ ಹಾಗೂ ಜೂನಿಯರ್ ಎಂಜಿನಿಯರ್ ಆಶಿಶ್ ಕುಮಾರ್ ಅಮಾನತುಗೊಂಡ ಅಧಿಕಾರಿಗಳು. ಇದನ್ನೂ ಓದಿ: ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ವಾತಾವರಣ ಕಲ್ಪಿಸಬೇಕು: ನಾಗಲಕ್ಷ್ಮಿ ಚೌಧರಿ
1959ರ ಡಿಎಂಸಿ ಸೇವೆಗಳ (ನಿಯಂತ್ರಣ ಮತ್ತು ಮೇಲ್ಮನವಿ) ನಿಯಮಗಳ ಅಡಿಯಲ್ಲಿ ನಾಗರಿಕ ಸಂಸ್ಥೆಯ ಆಯುಕ್ತರ ನಿರ್ದೇಶನದ ಮೇರೆಗೆ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ವಿಜಿಲೆನ್ಸ್ ಇಲಾಖೆಯಿಂದ ಅಮಾನತು ಆದೇಶಗಳನ್ನು ಹೊರಡಿಸಲಾಗಿದೆ. ನಿಯಮ 5(2) ಅಡಿಯಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ಆದೇಶಗಳು ತಿಳಿಸಿವೆ. ಇದನ್ನೂ ಓದಿ: ಸದನದಲ್ಲಿ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸುವುದು ನನ್ನ ಕರ್ತವ್ಯ: ಪರಿಷತ್ ಸಭಾಪತಿ ಸಲೀಂ ಅಹ್ಮದ್
ಘಟನೆ ಕುರಿತು ಮಾತನಾಡಿದ ಎಂಸಿಡಿ ಆಯುಕ್ತ ಸಂಜೀವ್ ಖಿರ್ವಾರ್, ದುರದೃಷ್ಟವಶಾತ್ ಏಳು ಜೀವಗಳನ್ನು ಕಳೆದುಕೊಂಡಿದ್ದೇವೆ. ಕುಸಿದ ಕಟ್ಟಡದ ಪಕ್ಕದಲ್ಲಿರುವ ಕಟ್ಟಡವೂ ದುರ್ಬಲಗೊಂಡಿರುವುದು ಕಂಡುಬಂದಿದೆ. ಅದನ್ನು ರಾತ್ರಿಯಿಡೀ ಬಲಪಡಿಸುವ ಕಾರ್ಯ ನಡೆದಿದೆ. ಮುಂದಿನ ಒಂದು ಅಥವಾ ಎರಡು ದಿನಗಳಲ್ಲಿ ಹಂತ ಹಂತವಾಗಿ ಅದನ್ನು ನೆಲಸಮಗೊಳಿಸುವ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಹೊನ್ನಾವರದಲ್ಲಿ ಪ್ರತಿಭಟನೆ; ಒಂದು ಲಕ್ಷ ಆಕ್ಷೇಪ ಪತ್ರ ಸಲ್ಲಿಕೆಗೆ ಸಿದ್ಧತೆ
ಅನಧಿಕೃತ ಕಟ್ಟಡಗಳ ವಿರುದ್ಧ ನಿರಂತರವಾಗಿ ಕ್ರಮ ಕೈಗೊಳ್ಳಲಾಗುತ್ತಿದೆ. ಆಗಸ್ಟ್‌ನಲ್ಲಿ ಇದೇ ಪ್ರದೇಶದಲ್ಲಿರುವ 3ರಿಂದ 4 ಕಟ್ಟಡಗಳ ನೆಲಸಮಕ್ಕೆ ಆದೇಶ ನೀಡಲಾಗಿತ್ತು. ಕಟ್ಟಡಗಳ ಸ್ಥಿತಿಗತಿಗಳನ್ನು ನಿಯಮಿತವಾಗಿ ಪರಿಶೀಲಿಸಲಾಗುತ್ತಿದೆ. ಕಳೆದ ಮೂರು ತಿಂಗಳಲ್ಲಿ ದೆಹಲಿಯಲ್ಲಿ 960 ಕಟ್ಟಡಗಳನ್ನು ನೆಲಸಮಗೊಳಿಸಲಾಗಿದ್ದು, 407 ಕಟ್ಟಡಗಳಿಗೆ ಸೀಲ್ ಹಾಕಲಾಗಿದೆ. ಅಲ್ಲದೆ, ಸುಮಾರು 1,500 ಕಟ್ಟಡಗಳಿಗೆ ಸೀಲಿಂಗ್ ಹಾಗೂ ನೆಲಸಮಕ್ಕೆ ಸಂಬಂಧಿಸಿದ ನೋಟಿಸ್‌ಗಳನ್ನು ನೀಡಲಾಗಿದೆ ಎಂದು ಸಂಜೀವ್ ತಿಳಿಸಿದ್ದಾರೆ. ಇದನ್ನೂ ಓದಿ: ಎಂಜಿನ್ ಆಯಿಲ್ ದಿಢೀರ್ ಕುಸಿತ; ಅಬುಧಾಬಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಮಾರ್ಗಮಧ್ಯೆ ಕೊಚ್ಚಿಗೆ ವಾಪಸ್
ಇನ್ನು ಸತ್ಯನಿಕೇತನ ಕಟ್ಟಡ ಕುಸಿತದ ಸ್ಥಳದಲ್ಲಿ ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳಡಿ ಸಿಲುಕಿರುವವರಿಗಾಗಿ ರಕ್ಷಣಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಕಟ್ಟಡದ ಮಾಲೀಕ ಹರಿರಾಮ್ ಬನ್ಸಾಲ್ ಘಟನೆ ಬಳಿಕ ತಲೆಮರೆಸಿಕೊಂಡಿದ್ದರು. ಅವರನ್ನು ಸೋಮವಾರ ಮಧ್ಯಾಹ್ನ ರಾಜಸ್ಥಾನದ ಭಿವಾಡಿಯಿಂದ ಬಂಧಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾ ವಿರುದ್ಧ ಹೋರಾಡಲು ಉಕ್ರೇನ್‌ನಲ್ಲಿ ಸೆಕ್ಸ್ ಚಿತ್ರೋದ್ಯಮಕ್ಕೆ ಕಾನೂನು ಮಾನ್ಯತೆ!
ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೋಮವಾರ ಸತ್ಯನಿಕೇತನಕ್ಕೆ ಭೇಟಿ ನೀಡಿ, ಸತತ ಎರಡನೇ ದಿನವೂ ನಡೆಯುತ್ತಿದ್ದ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪರಿಶೀಲಿಸಿದರು. ಈ ವೇಳೆ ಮಾತನಾಡಿದ ಅವರು, ಸಾರ್ವಜನಿಕ ಚಟುವಟಿಕೆಗಳಿಗೆ ಬಳಸುವ ಕಟ್ಟಡಗಳ ಸುರಕ್ಷತೆಯನ್ನು ಖಚಿತಪಡಿಸಲು ಸರ್ಕಾರ ಹೊಸ ನೀತಿ ರೂಪಿಸುತ್ತಿದೆ. ಈ ನೀತಿಯಡಿ ಪಿಜಿಗಳು, ನರ್ಸಿಂಗ್ ಹೋಂಗಳು, ಶಾಲೆಗಳು ಹಾಗೂ ಇತರ ಸಾರ್ವಜನಿಕ ಬಳಕೆಯ ಕಟ್ಟಡಗಳಿಗೆ ನಿಯಮಿತವಾಗಿ ಸ್ಟ್ರಕ್ಚರಲ್ ಆಡಿಟ್ ಮತ್ತು ಸುರಕ್ಷತಾ ಪ್ರಮಾಣಪತ್ರ ಕಡ್ಡಾಯಗೊಳಿಸುವ ಪ್ರಸ್ತಾವನೆ ಇದೆ. ನಿಗದಿತ ಸುರಕ್ಷತಾ ಮಾನದಂಡಗಳನ್ನು ಪೂರೈಸದ ಕಟ್ಟಡಗಳಲ್ಲಿ ಇಂತಹ ಚಟುವಟಿಕೆಗಳಿಗೆ ಅವಕಾಶ ನೀಡದಂತೆ ನೀತಿ ರೂಪಿಸಲಾಗುತ್ತಿದೆ ಎಂದರು. ಇದನ್ನೂ ಓದಿ: ಪ್ರವಾಹದಲ್ಲಿ ಮೃತಪಟ್ಟವರ ಸ್ಮರಣಾರ್ಥ ನೇಪಾಳದಲ್ಲಿ ರಾಷ್ಟ್ರೀಯ ಶೋಕಾಚರಣೆ
