– ಕಾನೂನು ಚೌಕಟ್ಟಿನಲ್ಲೇ ಎಲ್ಲವೂ ನಡೆಯಲಿದೆ ಎಂದು ಸಿಎಂ ಸ್ಪಷ್ಟನೆ
– ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿ; ಭರವಸೆ
ಚಿಕ್ಕಬಳ್ಳಾಪುರ: ನೈಸ್ ಯೋಜನೆ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲೇ ಕೆಲಸ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಾನೂನು ಅಭಿಪ್ರಾಯವನ್ನೂ ಪಡೆದುಕೊಂಡಿದ್ದೇವೆ. ಬೇಕಾದ್ರೆ ಕೊರ್ಟ್ಗೆ ಹೋಲಿ, ಉಪವಾಸ ಆದ್ರೂ ಮಾಡಲಿ ಎಂದು ಸಿಎಂ ಡಿಕೆ ಶಿವಕುಮಾರ್ (DK Sivakumar) ತಿರುಗೇಟು ನೀಡಿದರು.
ʻನೈಸ್ʼ ಪ್ರಾಜೆಕ್ಟ್ ವಿಚಾರದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ (HD Deve Gowda) ಅವರು ಬರೆದಿರುವ ಪತ್ರದ ವಿಚಾರವಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಇದನ್ನೂ ಓದಿ: ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳದಿಂದ ಮುಕ್ತವಾದ ವಾತಾವರಣ ಕಲ್ಪಿಸಬೇಕು: ನಾಗಲಕ್ಷ್ಮಿ ಚೌಧರಿ
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಮಾತನಾಡಿದ ಡಿಕೆಶಿ, ನಾವು ಏನೇ ಮಾಡಿದರೂ ಕಾನೂನು ಚೌಕಟ್ಟಿನಲ್ಲೇ ಮಾಡುತ್ತಿದ್ದೇವೆ. ಈ ವಿಚಾರದಲ್ಲಿ ಕಾನೂನು ಅಭಿಪ್ರಾಯವನ್ನೂ ಪಡೆದುಕೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಕಾನೂನು ಬಿಟ್ಟು ಯಾವುದೇ ಕೆಲಸ ಮಾಡುವುದಿಲ್ಲ. ಹೀಗಾಗಿ ಯಾರೂ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬೇಕಾದ್ರೆ ಕಾನೂನು ಇದೆ, ಕೋರ್ಟ್ ಇದೆ. ಉಪವಾಸ ಮಾಡಬೇಕಾದ್ರೆ ಮಾಡಲಿ. ನನಗೂ ಪ್ರಜ್ಞೆ ಇದೆ, ಬೇಸಿಕ್ ಕಾಮನ್ ಸೆನ್ಸ್ ಇದೆ. ನಿಮ್ಮ ವೈಯಕ್ತಿಕ ಅಭಿಪ್ರಾಯಗಳು ಹಾಗೂ ಚರ್ಚೆಗಳನ್ನ ನಾನು ಮೊದಲಿನಿಂದಲೂ ನೋಡಿದ್ದೇನೆ ಎಂದರು ಡಿಕೆಶಿ.
ಯಾವ ಅಗ್ರಿಮೆಂಟ್ಗೆ ಸಹಿ ಹಾಕಲಾಗಿದೆಯೋ, ಅದೇ ಹಾದಿಯಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಯಾರು ಆಸ್ತಿ ಕಳೆದುಕೊಂಡಿದ್ದಾರೋ ಅವರನ್ನು ರಕ್ಷಣೆ ಮಾಡಬೇಕು ಅಲ್ಲವೇ? ಈ ವಿಚಾರಕ್ಕೆ ಸಂಬಂಧಿಸಿದಂತೆ ಈ ಹಿಂದೆ ಸರ್ಕಾರಗಳು ಮಾಡಿಕೊಂಡಿರುವ ಅಗ್ರಿಮೆಂಟ್ಗಳನ್ನೆಲ್ಲ ತಾನು ಪರಿಶೀಲಿಸಿದ್ದೇನೆ. ಎಲ್ಲವನ್ನೂ ಕಾನೂನು ಚೌಕಟ್ಟಿನಲ್ಲೇ ಮುಂದುವರಿಸಲಾಗುವುದು ಎಂದು ಸಿಎಂ ಸ್ಪಷ್ಟಪಡಿಸಿದರು. ಇದನ್ನೂ ಓದಿ: ಸದನದಲ್ಲಿ ಪಕ್ಷಪಾತವಿಲ್ಲದೆ ಕಾರ್ಯನಿರ್ವಹಿಸುವುದು ನನ್ನ ಕರ್ತವ್ಯ: ಪರಿಷತ್ ಸಭಾಪತಿ ಸಲೀಂ ಅಹ್ಮದ್
ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ಜಾರಿ
ಇದಕ್ಕೂ ಮುನ್ನ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ನಡೆದ ರಾಮಯ್ಯ ವಿಜ್ಞಾನ ಮತ್ತು ಮ್ಯಾನೇಜ್ ಮೆಂಟ್ ಸಂಸ್ಥೆ ಉದ್ಘಾಟನೆ ಹಾಗೂ ನಾರಾಯಣ ಪ್ರಜ್ಞಾಲಯ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಡಿಕೆ ಶಿವಕುಮಾರ್ ಅವರು ಮಾತನಾಡಿದರು.
ನವ ಯುವ ಪೀಳಿಗೆಯ ಅಗತ್ಯ, ಆಲೋಚನೆಗೆ ತಕ್ಕಂತೆ ಕಾಂಗ್ರೆಸ್ ಪಕ್ಷದ ಹೈಕಮಾಂಡ್ ಸೂಚನೆಯಂತೆ ಕಾಂಗ್ರೆಸ್ ಆಡಳಿತದ ರಾಜ್ಯಗಳಲ್ಲಿ ನೂತನ ಶಿಕ್ಷಣ ನೀತಿ ರೂಪಿಸಲು ಮುಂದಾಗಿದ್ದೇವೆ ಎಂದು ತಿಳಿಸಿದರು.
Glad to inaugurate the Ramaiah Institute of Science and Management and join the foundation laying ceremony of Nareyana Pragnalaya in Devanahalli, Bengaluru.
Dr. M.R. Jayaram, Chairman, GEF(M) and Chancellor, RISM, Shri Gurucharan Gollerkeri, IAS (Retd.), Executive Director and… pic.twitter.com/V6WGoUUrMw
— DK Shivakumar (@DKShivakumar) September 7, 2026
ಶಿಕ್ಷಣ ನೀತಿಯ ಕುರಿತು ಚರ್ಚಿಸಲು ಕಾಂಗ್ರೆಸ್ ಆಡಳಿತವಿರುವ 4 ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ದೆಹಲಿಯಲ್ಲಿ ನಿಗದಿಯಾಗಿತ್ತು. ಆದರೆ ಕೊನೆ ಕ್ಷಣದಲ್ಲಿ ಅದು ರದ್ದಾಯಿತು. ವಿದ್ಯಾರ್ಥಿಗಳು ಕೇವಲ ಉದ್ಯೋಗ ಹುಡುಕುವವರಾಗದೇ ಉದ್ಯೋಗ ಸೃಷ್ಟಿಸುವ ಉದ್ಯಮಿಗಳಾಗಬೇಕು. ವಿಶ್ವದ 80 ಕ್ಕೂ ಹೆಚ್ಚು ಪ್ರಸಿದ್ಧ ವಿಶ್ವವಿದ್ಯಾಲಯಗಳು ಕರ್ನಾಟಕದ ವಿದ್ಯಾರ್ಥಿಗಳನ್ನ ಆಯ್ಕೆ ಮಾಡಲು ಆಸಕ್ತಿ ತೋರುತ್ತಿವೆ. ಇತ್ತೀಚೆಗೆ ಮೈಸೂರಿನಲ್ಲಿ ಪ್ರಧಾನಿ ಮೋದಿ ಅವರನ್ನ ಭೇಟಿಯಾಗಿದ್ದ ವೇಳೆ ಭಾರತವನ್ನ ಅಭಿವೃದ್ಧಿಪಡಿಸಬೇಕಾದರೆ ಅದು ಬೆಂಗಳೂರು ಮತ್ತು ಕರ್ನಾಟಕದ ಮೂಲಕವೇ ಸಾಧ್ಯ ಎಂದು ಹೇಳಿದ್ದೆ ಎಂದು ತಿಳಿಸಿದರು.
