ಹಾವೇರಿ: ಸವಣೂರು (Haveri) ತಾಲೂಕನ್ನು ಬರ ಪಟ್ಟಿಗೆ ಸೇರಿಸಿ ಎಂದು ಬಿಜೆಪಿ ಕಾರ್ಯಕರ್ತರು (BJP) ಮತ್ತು ರೈತರು ತಹಸೀಲ್ದಾರರ ಕಚೇರಿಯ ಮುಂದೆ ಭಜನೆ ಮಾಡುವ ಮೂಲಕ ಪ್ರತಿಭಟನೆ ಮಾಡಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾವೇರಿ ಜಿಲ್ಲೆಯಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗಿಲ್ಲ. ರೈತರು ಈಗಾಗಲೇ 2 ಬಾರಿ ಬಿತ್ತನೆ ಮಾಡಿದ್ದಾರೆ. ಅಂದುಕೊಂಡ ರೀತಿಯಲ್ಲಿ ಫಸಲು ಬಂದಿಲ್ಲ. ಇದರಿಂದ ರೈತರು ಸಂಕಷ್ಟದಲ್ಲಿದ್ದಾರೆ. ಸರ್ಕಾರ ಕೆಲವು ತಾಲೂಕುಗಳನ್ನ ಮಾತ್ರ ಬರಪೀಡಿತ ಪ್ರದೇಶಗಳೆಂದು ಘೋಷಣೆ ಮಾಡಿ ಮೂಗಿಗೆ ತುಪ್ಪ ಹಚ್ಚುವ ಕೆಲಸ ಮಾಡಿದೆ ಎಂದು ಆರೋಪಿಸಿದ್ದಾರೆ
ಸರ್ಕಾರ ಎರಡನೇ ಪಟ್ಟಿಯಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳನ್ನ ಬರ ಪಟ್ಟಿಗೆ ಸೇರಿಸಬೇಕೆಂದು ತಹಸೀಲ್ದಾರರ ಮೂಲಕ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ್ದಾರೆ. ತಾಲೂಕಿನ ಗ್ರಾಮಗಳನ್ನು ಬರಪೀಡಿತವೆಂದು ಘೋಷಿಸಿ ಸೂಕ್ತ ಪರಿಹಾರ ನೀಡುವಂತೆ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ದೇವೇಗೌಡರು ಬೇಕಿದ್ರೆ ಕೋರ್ಟ್‌ಗೆ ಹೋಗಲಿ, ಉಪವಾಸ ಮಾಡಲಿ – ʻನೈಸ್ʼ ಪತ್ರ ವಿಚಾರಕ್ಕೆ ಸಿಎಂ ಡಿಕೆಶಿ ತಿರುಗೇಟು
