– ಸಿಎಂ ಸೂಚನೆ ಬಳಿಕ ಷರತ್ತುಬದ್ಧ ಅನುಮತಿ
ಬಳ್ಳಾರಿ: ವಿಜಯೇಂದ್ರ ನೇತೃತ್ವದ ಬಿಜೆಪಿ ಪಾದಯಾತ್ರೆಯ (BJP Padyatra) ಸಮಾರೋಪ ಸಮಾರಂಭಕ್ಕೆ ಬಳ್ಳಾರಿಯ (Ballari) ಎಕ್ಸ್ ಮುನಿಸಿಪಲ್ ಶಾಲಾ ಮೈದಾನ ಬಳಸಲು ಕೊನೆಗೂ ಬಳ್ಳಾರಿ ಜಿಲ್ಲಾಡಳಿತ ಅನುಮತಿ ನೀಡಿದೆ.
ಬಿಜೆಪಿ ನಾಯಕರಿಂದ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸಿಎಂ ಸೂಚನೆ ಮೇರೆಗೆ ಜಿಲ್ಲಾಡಳಿತ ಷರತ್ತುಬದ್ಧ ಅನುಮತಿ ನೀಡಿದೆ. ಸೆಪ್ಟೆಂಬರ್ 10 ರಂದು ಮಧ್ಯಾಹ್ನ 3 ರಿಂದ ರಾತ್ರಿ 8 ಗಂಟೆ ವರೆಗೆ ಸಮಾರೋಪ ಕಾರ್ಯಕ್ರಮ ನಡೆಸಲು ಬಿಜೆಪಿ ಪೂರ್ವತಯಾರಿ ಮಾಡಿಕೊಂಡಿದೆ. ಇದನ್ನೂ ಓದಿ: ತಮಿಳುನಾಡಿಗೆ 6,000 ಕ್ಯೂಸೆಕ್ ನೀರು ಬಿಡಲು CWRC ಆದೇಶಿಸಿದೆ – ಇದು ನೋವಿನ ಸಂಗತಿ: ಚಲುವರಾಯಸ್ವಾಮಿ
ಎಕ್ಸ್ ಮುನ್ಸಿಪಲ್ ಶಾಲಾ ಮೈದಾನದಲ್ಲಿ ʻಬಳ್ಳಾರಿ ಚಲೋʼ ಸಮಾರೋಪ ಸಮಾರಂಭ ನಡೆಸಲು ರಾಜ್ಯ ಸರ್ಕಾರ ಅನುಮತಿ ನಿರಾಕರಿಸಿತ್ತು. ಶಾಲಾ ಶಿಕ್ಷಣ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆಯೂ ಕೂಡ ಕಳೆದ ಒಂದು ವಾರದಿಂದ ಸಮಾವೇಶಕ್ಕೆ ಮೈದಾನ ನೀಡಲು ಅನುಮತಿಸಿರಲಿಲ್ಲ. ಈ ಸಂಬಂಧ ಬಿಜೆಪಿ ನಾಯಕರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಇಂದು ಮಾತುಕತೆ ನಡೆಸಿದ್ದರು.
ಶಾಸಕ ಜನಾರ್ದನ ರೆಡ್ಡಿ ನೇತೃತ್ವದಲ್ಲಿ ಇತರ ನಾಯಕರು ಜಿಲ್ಲಾಧಿಕಾರಿ ನಾಗೇಂದ್ರ ಪ್ರಸಾದ್ ಅವರೊಂದಿಗೆ ಸಭೆ ನಡೆಸಿದ್ದರು. ಈ ವೇಳೆ ಬಿಜೆಪಿ ನಾಯಕರಿಂದಲೂ ಸಾಕಷ್ಟು ಆಕ್ರೋಶ ವ್ಯಕ್ತವಾದ ಹಿನ್ನೆಲೆ ಸಮಾವೇಶಕ್ಕೆ ಅನುಮತಿ ನೀಡಲಾಗಿದೆ. ಸಿಎಂ ಸೂಚನೆ ಮೇರೆಗೆ ಬಳ್ಳಾರಿ ಡಿಸಿ ಅನುಮತಿ ನೀಡಿದ್ದಾರೆ. ಇದನ್ನೂ ಓದಿ: ಕೆಪಿಎಸ್‌ಸಿ ಅಕ್ರಮದ ಬೆನ್ನಲ್ಲೇ ಶಿವಶಂಕರಪ್ಪ ಸಾಹುಕಾರ್‌ಗೆ ಭೂಕಂಟಕ; 27 ಎಕರೆ ಭೂಕಬಳಿಕೆ ಆರೋಪ
