ವಿಜಯಪುರ: ಜಿಲ್ಲೆಯ ಇಂಡಿ (Indi) ತಾಲೂಕಿನ ಲಚ್ಯಾಣ (Lachyan) ಗ್ರಾಮದಲ್ಲಿ ಹಾಡಹಗಲೇ ರೌಡಿಶೀಟರ್ ಕೊಲೆಯಾಗಿದೆ.
ಸುಖದೇವ್ ಭಂಡಾರಿ (32) ಕೊಲೆಯಾದ ರೌಡಿಶೀಟರ್ (Rowdy Sheeter) ಎಂದು ತಿಳಿದುಬಂದಿದೆ. ಇದನ್ನೂ ಓದಿ: ಪ್ರದೋಷ್ ಮಾಫಿ ಸಾಕ್ಷಿ ಪ್ರಕ್ರಿಯೆ ಪ್ರಶ್ನಿಸಿ ದರ್ಶನ್ ಸಲ್ಲಿಸಿದ್ದ ಅರ್ಜಿ ಭಾಗಶಃ ಅಂಗೀಕಾರ
ಹಳೆ ವೈಷಮ್ಯಕ್ಕೆ ರೌಡಿಶೀಟರ್‌ನನ್ನು ಬರ್ಬರವಾಗಿ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸದ್ಯ ಸ್ಥಳಕ್ಕೆ ಇಂಡಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಈ ಸಂಬಂಧ ಇಂಡಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೂ ಮುನ್ನ ಭದ್ರತಾಲೋಪ – ನಕಲಿ ಪಿಎಂಒ ಐಡಿ, ಬಂದೂಕು ಹೊಂದಿದ್ದ ಇಬ್ಬರು ವಶಕ್ಕೆ
