ಕಾರವಾರ: ಕರ್ತವ್ಯದಲ್ಲಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕಚೇರಿಯಲ್ಲೇ ಕುಸಿದುಬಿದ್ದ ಕಾರವಾರ ತಹಶೀಲ್ದಾರ್ ಕಚೇರಿಯ ಪ್ರಥಮ ದರ್ಜೆ ಸಹಾಯಕ (FDA) ಪಂಡರಿನಾಥ್ ವಿ. ನಾಯ್ಕ (51) ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮಂಗಳವಾರ ಬೆಳಗ್ಗೆ ಎಂದಿನಂತೆ ಕಚೇರಿಗೆ ಆಗಮಿಸಿದ್ದ ಪಂಡರಿನಾಥ್ ನಾಯ್ಕ ಅವರು ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಂಡಿದ್ದರು. ಈ ವೇಳೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಕಚೇರಿಯಲ್ಲೇ ಕುಸಿದುಬಿದ್ದಿದ್ದಾರೆ. ಇದನ್ನೂ ಓದಿ: ಬುಧವಾರ ಬಳ್ಳಾರಿ ನಗರಕ್ಕೆ ಬಿಜೆಪಿ ಪಾದಯಾತ್ರೆ ಎಂಟ್ರಿ – ಗುರುವಾರ ಬೃಹತ್ ಸಮಾರೋಪ
ಘಟನೆ ಗಮನಿಸಿದ ಕಚೇರಿ ಸಿಬ್ಬಂದಿ ತಕ್ಷಣ ನೆರವಿಗೆ ಧಾವಿಸಿ, ತಹಶೀಲ್ದಾರ್ ಅವರ ಜೀಪ್ನಲ್ಲಿ ಅವರನ್ನು ಕಾರವಾರದ ಕ್ರಿಮ್ಸ್ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ತುರ್ತು ಚಿಕಿತ್ಸೆ ನೀಡಿದರೂ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬರದೆ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ (Heart Attack) ಪಂಡರಿನಾಥ್ ನಾಯ್ಕ ಮೃತಪಟ್ಟಿರುವುದಾಗಿ ವೈದ್ಯರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲಿ ಭತ್ತದ ಬಿತ್ತನೆಗೆ ಮುಂಗಾರು ಹೊಡೆತ – 4.28 ಲಕ್ಷ ಹೆಕ್ಟೇರ್ನಲ್ಲಿ ಬಿತ್ತನೆ ಇಳಿಕೆ
ಕರ್ತವ್ಯದಲ್ಲಿದ್ದ ಸಿಬ್ಬಂದಿಯೊಬ್ಬರು ದಿಢೀರ್ ಮೃತಪಟ್ಟ ಸುದ್ದಿ ತಹಶೀಲ್ದಾರ್ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳಲ್ಲಿ ಆಘಾತ ಮೂಡಿಸಿದೆ. ಪಂಡರಿನಾಥ್ ನಾಯ್ಕ ಅವರ ಅಕಾಲಿಕ ನಿಧನಕ್ಕೆ ಕಚೇರಿ ಸಿಬ್ಬಂದಿ ಹಾಗೂ ಸಹೋದ್ಯೋಗಿಗಳು ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ: ಬರದ ಮಧ್ಯೆ ರಾಜ್ಯಕ್ಕೆ ಕಾವೇರಿ ಸಿಡಿಲು; ಮತ್ತೆ 15 ದಿನ ತಮಿಳುನಾಡಿಗೆ 7.5 ಟಿಎಂಸಿ ನೀರು ಹರಿಸಲು ಸೂಚನೆ
