ಮಂಡ್ಯ: ಮೈಶುಗರ್ ಕಾರ್ಖಾನೆ (Mysugar Factory) ಬಾಯ್ಲರ್ಗೆ ಬಿದ್ದು ಕಾರ್ಮಿಕನೊಬ್ಬ ದುರ್ಮರಣಕ್ಕೀಡಾದ ಘಟನೆ ನಡೆದಿದೆ.
ಕೆ.ಶೆಟ್ಟಿಹಳ್ಳಿಯ ಚರಣ್ ಕುಮಾರ್ (33) ಮೃತ ಕಾರ್ಮಿಕ. ಆಡಳಿತ ಮಂಡಳಿ ನಿರ್ಲಕ್ಷ್ಯಕ್ಕೆ ಕಾರ್ಮಿಕ ಸಾವನ್ನಪ್ಪಿದ್ದಾನೆಂದು ಆರೋಪಿಸಲಾಗಿದೆ. ಮೃತ ಕಾರ್ಮಿಕನ ಕುಟುಂಬಸ್ಥರು ಹಾಗೂ ಗ್ರಾಮಸ್ಥರು ಕಾರ್ಖಾನೆ ಎದುರು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂ-ಮಂ ಹೆದ್ದಾರಿಯಲ್ಲಿ ಭೀಕರ ಅಪಘಾತ; ಟ್ರ್ಯಾಕ್ಟರ್ಗೆ ಬಸ್ ಡಿಕ್ಕಿ, KSRTC ಚಾಲಕ ಸ್ಥಳದಲ್ಲೇ ಸಾವು
ಶ್ರೇಯ ಏಜೆನ್ಸಿಯಡಿ ಗುತ್ತಿಗೆ ಆಧಾರದಲ್ಲಿ ಚರಣ್ ಒಂದೂವರೆ ವರ್ಷದಿಂದ ಕೆಲಸ ಮಾಡುತ್ತಿದ್ದ. ಸೆಪ್ಟೆಂಬರ್ 3ರಂದು ಬಾಯ್ಲರ್ಗೆ ಬಿದ್ದಿದ್ದ. ಆತನನ್ನು ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಕಾರ್ಮಿಕ ಮೃತಪಟ್ಟಿದ್ದಾನೆ.
ಸೂಕ್ತ ಪರಿಹಾರಕ್ಕಾಗಿ ಮೃತ ಚರಣ್ ಕುಟುಂಬಸ್ಥರು ಹಾಗೂ ಗ್ರಾಮಸ್ಥ ಆಗ್ರಹಿಸಿದ್ದಾರೆ. ಪ್ರತಿಭಟನೆಗೆ ವಿವಿಧ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಕಾರ್ಖಾನೆ ಎದುರು ಬಿಗಿ ಪೊಲೀಸ್ ಬಂದೋ ಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ. ಇದನ್ನೂ ಓದಿ: ದೆಹಲಿ ಬಿಲ್ಡಿಂಗ್ ಕುಸಿತ ಕೇಸ್ – ಪಿಜಿ ನೋಡಿಕೊಳ್ಳುತ್ತಿದ್ದ ವ್ಯಕ್ತಿ, ಗುತ್ತಿಗೆದಾರ ಅರೆಸ್ಟ್
ಅಧಿಕಾರಿಗಳು ಹಾಗೂ ಮೈಶುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ್ ಅವರು ಪ್ರತಿಭಟನಾ ಸ್ಥಳಕ್ಕೆ ಬಂದಿಲ್ಲ ಎಂದು ಮೃತ ಕಾರ್ಮಿಕನ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ. ನಮಗೆ ನ್ಯಾಯ ಬೇಕು ಎಂದು ಪಟ್ಟು ಹಿಡಿದಿದ್ದಾರೆ.
