ಬಳ್ಳಾರಿ: ಇಲ್ಲಿನ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಹಮ್ಮಿಕೊಂಡಿರುವ ಬಿಜೆಪಿ ಬೃಹತ್ ಸಮಾವೇಶ ಆರಂಭವಾಗಿದೆ. ಬಿಜೆಪಿ (BJP) ಹಮ್ಮಿಕೊಂಡಿದ್ದ ಪಾದಯಾತ್ರೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ಈ ಬೃಹತ್ ಸಮಾರೋಪ ಸಮಾವೇಶ ಆಯೋಜಿಸಲಾಗಿದೆ. ಸಮಾವೇಶದಲ್ಲಿ ಸಾವಿರಾರು ಸಂಖ್ಯೆಯ ಕಾರ್ಯಕರ್ತರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದಾರೆ.
ಸಮಾವೇಶದ ಹಿನ್ನೆಲೆ ವೇದಿಕೆಯಲ್ಲಿ ನೂರಕ್ಕೂ ಹೆಚ್ಚು ನಾಯಕರು ಕುಳಿತುಕೊಳ್ಳಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಹಲವು ಬಿಜೆಪಿ ನಾಯಕರು ವೇದಿಕೆಯಲ್ಲಿ ಆಸೀನರಾಗಿದ್ದಾರೆ.
ರಾಜ್ಯ ಬಿಜೆಪಿ ಸಹ ಉಸ್ತುವಾರಿ ಸುಧಾಕರ್ ರೆಡ್ಡಿ, ಶ್ರೀರಾಮುಲು, ಛಲವಾದಿ ನಾರಾಯಣಸ್ವಾಮಿ, ರಾಜುಗೌಡ ನಾಯಕ್, ರೇಣುಕಾಚಾರ್ಯ, ಸಿ.ಟಿ ರವಿ, ಮುರುಗೇಶ್ ನಿರಾಣಿ, ಜಗ್ಗೇಶ್, ಬಿ.ಪಿ ಹರೀಶ್, ಅರುಣಾ ಲಕ್ಷ್ಮಿದೇವಿ, ಬಿ.ಸಿ ಪಾಟೀಲ್, ಹೇಮಲತಾ ನಾಯಕ್, ಸೋಮಶೇಖರ್ ರೆಡ್ಡಿ, ಭಾರತಿ ಶೆಟ್ಟಿ, ದಡೇಸುಗೂರು, ಎನ್. ರವಿಕುಮಾರ್ ಸೇರಿದಂತೆ ಹಲವು ನಾಯಕರು ಸಮಾವೇಶದಲ್ಲಿ ಭಾಗಿಯಾಗಿದ್ದಾರೆ.
ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರ್. ಅಶೋಕ್, ಬಸವರಾಜ ಬೊಮ್ಮಾಯಿ ಸೇರಿದಂತೆ ಮತ್ತಿತರ ಪ್ರಮುಖ ನಾಯಕರು ಸಮಾವೇಶಕ್ಕೆ ಆಗಮಿಸಬೇಕಿದೆ.
ಬಿಜೆಪಿ ಸಮಾವೇಶದ ಹಿನ್ನೆಲೆಯಲ್ಲಿ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಾವಿರಾರು ಕಾರ್ಯಕರ್ತರ ಉಪಸ್ಥಿತಿಯಿಂದ ಸಮಾವೇಶ ಕಳೆಗಟ್ಟಿದೆ.

