ಮುಂಬೈ: ಮಹಾರಾಷ್ಟ್ರದ ನಾಂದೇಡ್-ಭೋಕರ್ ಹೆದ್ದಾರಿಯಲ್ಲಿ ಟ್ಯಾಕ್ಸಿ ಮತ್ತು ಟ್ರಕ್ ನಡುವೆ ಭೀಕರ (Road accident) ಅಪಘಾತ ಸಂಭವಿಸಿದೆ, ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಎಂಟು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಟಾಟಾ ಮ್ಯಾಜಿಕ್ ಕಾರು ನಾಂದೇಡ್ ನಿಂದ ಭೋಕರ್ ಕಡೆಗೆ ಹೊರಟಿದ್ದ ವೇಳೆ ರಾತ್ರಿ 8 ಗಂಟೆ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ.
ಆರು ಜನರು ಸ್ಥಳದಲ್ಲೇ ಸಾವನ್ನಪ್ಪಿದರೆ, ಎಂಟು ಜನರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ನಾಂದೇಡ್ ಮತ್ತು ಭೋಕರ್‌ನ ಸರ್ಕಾರಿ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
ಮಾಹಿತಿ ತಿಳಿದ ಕೂಡಲೇ ಹೆದ್ದಾರಿ ಪೊಲೀಸರು ಮತ್ತು ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಮಾಹಿತಿ ಕಲೆಹಾಕಿದ್ದಾರೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ

