ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆದಿದ್ದು, ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಹಲವು ಪ್ರಮುಖ ವಿಚಾರಗಳ ಕುರಿತು ಚರ್ಚೆ ನಡೆಸಲಾಗಿದೆ. ಸಭೆಯಲ್ಲಿ ಪ್ರಮುಖವಾಗಿ ಬೆಂಗಳೂರು ನಗರವನ್ನ ಗುಂಡಿ ಮುಕ್ತ ಮಾಡುವುದಕ್ಕೆ ಹಾಗೂ ವೈಟ್ ಟ್ಯಾಪಿಂಗ್ ಕಾಮಗಾರಿಗೆ ಹೆಚ್ಚಿನ ಒತ್ತು ನೀಡಲು ನಿರ್ಧರಿಸಲಾಗಿದೆ.
ಜಿಬಿಎ ಕೌನ್ಸಿಲ್ ಸಭಾಂಗಣದಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 2ನೇ ಸಭೆಯಲ್ಲಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರೊಂದಿಗೆ ಭಾಗವಹಿಸಿದೆನು.
ಸಭೆಯಲ್ಲಿ ಸಚಿವರಾದ ಶ್ರೀ ಕೆ. ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಬಿಎ ಆಯುಕ್ತರಾದ ಶ್ರೀ ಎಂ. ಮಹೇಶ್ವರ್ ರಾವ್ ಅವರು ಸೇರಿದಂತೆ ಶಾಸಕರು ಹಾಗೂ… pic.twitter.com/PRUV2tyWia
— DK Shivakumar (@DKShivakumar) September 10, 2026
ಬೆಂಗಳೂರಿನ ವಿವಿಧ ರಸ್ತೆಗಳಲ್ಲಿ ಒಟ್ಟು 1,700 ಕೋಟಿ ರೂಪಾಯಿ ವೆಚ್ಚದಲ್ಲಿ ವೈಟ್ ಟ್ಯಾಪಿಂಗ್ ಕಾಮಗಾರಿ ಕೈಗೊಳ್ಳಲಾಗುತ್ತಿದ್ದು, ಒಟ್ಟು 121 ಕಿಲೋಮೀಟರ್ ರಸ್ತೆಗಳಿಗೆ ವೈಟ್ ಟ್ಯಾಪಿಂಗ್ ಮಾಡಲು ಯೋಜಿಸಲಾಗಿದೆ. ಈ ಪೈಕಿ ಈಗಾಗಲೇ 64 ಕಿಲೋಮೀಟರ್ ಕಾಮಗಾರಿ ಪೂರ್ಣಗೊಂಡಿದೆ. ಇದರ ಜೊತೆಗೆ ಬೆಂಗಳೂರಿನ ಪ್ರಮುಖ ಹಾಗೂ ಉಪಮುಖ್ಯ ರಸ್ತೆಗಳಿಗೆ ಹೊಸದಾಗಿ ಡಾಂಬರೀಕರಣ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಒಟ್ಟು 694 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಡಾಂಬರೀಕರಣ ಕಾಮಗಾರಿ ನಡೆಯಲಿದೆ.
ರಾಜ್ಯ ಸರ್ಕಾರ ಬೆಂಗಳೂರಿನ ಮೂಲಸೌಕರ್ಯ ಅಭಿವೃದ್ಧಿಗಾಗಿ ನೀಡಿರುವ ವಿಶೇಷ 2,000 ಕೋಟಿ ರೂಪಾಯಿ ಅನುದಾನ ಸಮರ್ಪಕವಾಗಿ ಬಳಸಿಕೊಂಡು ನಗರದ ಅಭಿವೃದ್ಧಿಗೆ ವೇಗ ನೀಡಲು ಸಭೆಯಲ್ಲಿ ಸೂಚಿಸಲಾಗಿದೆ. ಈ ಅನುದಾನದಡಿ ರಸ್ತೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಪ್ರಮುಖ ಕಟ್ಟಡಗಳು ಹಾಗೂ ಸ್ಮಶಾನಗಳ ಅಭಿವೃದ್ಧಿ ಸೇರಿದಂತೆ ಹಲವು ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೊಳ್ಳಲು ಕ್ರಮವಹಿಸಲಾಗುತ್ತಿದೆ.

