ಮುಂಬೈ: ಟ್ರಕ್ ಮತ್ತು ಪಿಕಪ್ ನಡುವೆ ಸಂಭವಿಸಿದ ಅಪಘಾತದಲ್ಲಿ ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಭಂಡಾರಾ ಜಿಲ್ಲೆಯ ನಾಗ್ಪುರ-ರಾಯ್‌ಪುರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಪಿಂಪಲ್‌ಗಾಂವ್ ಪ್ರದೇಶದಲ್ಲಿ ಇಂದು (ಸೆ.11) ಮುಂಜಾನೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇತರ ಮೂವರನ್ನು ತಕ್ಷಣವೇ ಸಕೋಲಿಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದ ಟ್ಯಾಕ್ಸಿ; 6 ಮಂದಿ ಸ್ಥಳದಲ್ಲೇ ಸಾವು
ಅಪಘಾತದ ನಂತರ ಪೊಲೀಸರು ಮತ್ತು ಸ್ಥಳೀಯ ನಿವಾಸಿಗಳು ತಕ್ಷಣವೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಕೈಗೊಂಡರು. ವಾಹನದಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲಾಗಿದ್ದು, ಶವಾಗಾರಕ್ಕೆ ರವಾನಿಸಲಾಗಿದೆ.
ಅಪಘಾತದ ಬಳಿಕ ಈ ಪ್ರದೇಶದಲ್ಲಿ ಸಂಚಾರಕ್ಕೆ ಸ್ವಲ್ಪ ಅಡಚಣೆ ಉಂಟಾಗಿತ್ತು. ಅಪಘಾತಕ್ಕೆ ಕಾರಣವೇನು ಎಂಬ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಇದನ್ನೂ ಓದಿ: ಡೆಮಾಲಿಷನ್ ಕೆಲಸದ ವೇಳೆ ನೀರಿನ ಟ್ಯಾಂಕ್‌ನ ಸ್ಲ್ಯಾಬ್ ಕುಸಿತ – ಇಬ್ಬರು ಕಾರ್ಮಿಕರು ಸಾವು, ಮೂವರ ರಕ್ಷಣೆ

