ಬೆಂಗಳೂರು: ನಗರದ ಬನಶಂಕರಿಯಲ್ಲಿ (Banshankari) ಮತ್ತೆ ಚಿರತೆ (Leopard) ಕಾಣಿಸಿಕೊಂಡಿದ್ದು, ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಇದಕ್ಕೂ ಮುನ್ನ ಜುಲೈ ತಿಂಗಳಲ್ಲಿ ಇದೇ ಏರಿಯಾದಲ್ಲಿ ಚಿರತೆ ಕಾಣಿಸಿಕೊಂಡಿತ್ತು.
ಬನಶಂಕರಿ 5ನೇ ಹಂತದ 2ನೇ ಬ್ಲಾಕ್‌ನಲ್ಲಿ ಚಿರತೆ ಮತ್ತೆ ಪ್ರತ್ಯಕ್ಷಗೊಂಡಿದೆ. ಸೆ.9ರ ಬೆಳಗಿನ ಜಾವ 4 ಗಂಟೆಗೆ ಮನೆಯೊಂದರ ಮುಂದೆ ಚಿರತೆ ಓಡಾಟ ನಡೆಸಿದ್ದು, ಈ ವೇಳೆ ಅಲ್ಲಿದ್ದ ನಾಯಿಗಳ ಮೇಲೆ ದಾಳಿಗೆ ಯತ್ನಿಸಿದೆ. ಚಿರತೆ ಓಡಾಟದ ಎಲ್ಲಾ ದೃಶ್ಯಗಳು ಸ್ಥಳದಲ್ಲಿದ್ದ ಸಿಸಿಟಿವಿಯೊಂದರಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ಟ್ರೆಂಡ್ ಗೀಳಿಗೆ ಬಿದ್ದು ಟ್ರ್ಯಾಪ್ ಆಗ್ಬೇಡಿ – 80s ಫೋಟೊ ಟ್ರೆಂಡ್ ಬಗ್ಗೆ ಪೊಲೀಸರ ಎಚ್ಚರಿಕೆ!
ಈ ಹಿಂದೆ ಪಟಾಕಿ ಸಿಡಿಸಿ ಚಿರತೆಯನ್ನು ಕಾಡಿಗೆ ಅಟ್ಟಲಾಗಿತ್ತು. ಆದರೆ ಈಗ ಮತ್ತೆ ವಾಪಸ್ ಬಂದಿದೆ. ಇದರಿಂದ ಸ್ಥಳೀಯರಲ್ಲಿ ತೀವ್ರ ಆತಂಕ ಮೂಡಿಸಿದೆ.

