ಬೆಂಗಳೂರು: ಸಿಎಂ ಡಿಕೆಶಿ ಎಪಿಎಂಸಿಗೆ (APMC) ದಿಢೀರ್ ಭೇಟಿಕೊಟ್ಟ ಬಳಿಕ ಬೆಂಗಳೂರು ಪೊಲೀಸರು (Bengaluru Police) ನಗರದಾದ್ಯಂತ ಸ್ಪೆಷಲ್ ಡ್ರೈವ್ ನಡೆಸಿ, 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.
ಇತ್ತೀಚಿಗೆ ಸಿಎಂ ಡಿಕೆಶಿ (DK Shivakumar) ಎಪಿಎಂಸಿಗೆ ಭೇಟಿ ನೀಡಿದಾಗ ಬಾಲಕಾರ್ಮಿಕರ ಬಗ್ಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ದರು. ಸೂಚನೆ ಬೆನ್ನಲ್ಲೇ ಎಚ್ಚೆತ್ತ ಬೆಂಗಳೂರು ಪೊಲೀಸರು ನಗರದಾದ್ಯಂತ ಸ್ಪೆಷಲ್ ಡ್ರೈವ್ ಆರಂಭಿಸಿದ್ದಾರೆ.ಇದನ್ನೂ ಓದಿ: ಮೋದಿಯವ್ರು ಹೊರಗಡೆ ಹೋಗಿ ಹೂಡಿಕೆ ಮಾಡಿ ಅಂತಾರೆ, ಜಾರಕಿಹೊಳಿ ಅದನ್ನೇ ಮಾಡಿದ್ದಾರೆ: ಪ್ರಿಯಾಂಕ್ ಖರ್ಗೆ
ಹೋಟೆಲ್, ಶಾಪ್ಗಳು, ಗ್ಯಾರೇಜ್ ಹಾಗೂ ಪೆಟ್ರೋಲ್ ಬಂಕ್ ಸೇರಿದಂತೆ ಎಲ್ಲಾ ಕಡೆಗಳಲ್ಲೂ ವ್ಯಾಪಕ ಪರಿಶೀಲನೆ ನಡೆಸಲಾಗಿದ್ದು, ಈ ವೇಳೆ ಕೆಲ ಕಡೆ ಬಾಲಕಾರ್ಮಿಕರು ಪತ್ತೆಯಾಗಿದ್ದಾರೆ. ಈ ಮೂಲಕ ಬೆಂಗಳೂರಿನಲ್ಲಿ ಬಾಲಕಾರ್ಮಿಕ ಪದ್ಧತಿ ಇನ್ನೂ ಜೀವಂತವಾಗಿರುವುದು ಬೆಳಕಿಗೆ ಬಂದಿದೆ. ಇದನ್ನೂ ಓದಿ: ಸತೀಶ್ ಜಾರಕಿಹೊಳಿ ವಿರುದ್ಧ ಎಡಿಜಿಪಿ ಕಂಪನಿಯಿಂದ ಕಿಕ್ಬ್ಯಾಕ್ ಪಡೆದಿರೋ ಆರೋಪ; ED ಸ್ಫೋಟಕ ಮಾಹಿತಿ
ಈ ಬಗ್ಗೆ ಉತ್ತರ ವಿಭಾಗದ ಡಿಸಿಪಿ ನ್ಯಾಮಗೌಡ ಅವರು ಮಾಹಿತಿ ನೀಡಿದ್ದು, ಉತ್ತರ ವಿಭಾಗ ಒಂದರಲ್ಲೇ ಸುಮಾರು 100ಕ್ಕೂ ಹೆಚ್ಚು ಕಡೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದು, ಇದುವರೆಗೂ 17 ಬಾಲಕಾರ್ಮಿಕರನ್ನು ರಕ್ಷಣೆ ಮಾಡಿರುವುದಾಗಿ ತಿಳಿಸಿದ್ದಾರೆ.
ಇತ್ತೀಚಿಗೆ ಸಿಎಂ ಡಿ.ಕೆ ಶಿವಕುಮಾರ್ ಅವರು ಎಪಿಎಂಸಿಗೆ ದಿಢೀರ್ ಭೇಟಿ ನೀಡಿದ್ದ ಸಂದರ್ಭದಲ್ಲಿ ಬಾಲಕಾರ್ಮಿಕನೊಬ್ಬ ಸಿಕ್ಕಿಬಿದ್ದಿದ್ದ. ಈ ವೇಳೆ ಸ್ಥಳೀಯ ಪೊಲೀಸರನ್ನು ಸಿಎಂ ತರಾಟೆಗೆ ತೆಗೆದುಕೊಂಡಿದ್ದರು. ಅಲ್ಲದೇ ಮಹಿಳಾ ಕೂಲಿ ಕಾರ್ಮಿಕರು ಮಕ್ಕಳನ್ನು ಕೆಲಸಕ್ಕೆ ಬಳಸಿಕೊಳ್ಳುತ್ತಿರುವ ವಿಷಯವನ್ನು ಪ್ರಸ್ತಾಪಿಸಿ, ಸಿಎಂಗೆ ದೂರು ನೀಡಿದ್ದರು. ಈ ದೂರಿನ ಬೆನ್ನಲ್ಲೇ ಕೂಡಲೇ ಇಡೀ ಬೆಂಗಳೂರಿನಾದ್ಯಂತ ಪರಿಶೀಲನೆ ನಡೆಸುವಂತೆ ಸಿಎಂ ಕಟ್ಟುನಿಟ್ಟಿನ ಸೂಚನೆ ನೀಡಿದ್ದರು.ಇದನ್ನೂ ಓದಿ: ಮಸೀದಿ ಇರೋ ರಸ್ತೆಯಲ್ಲಿ ಗಣಪತಿ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿಡಿಸ್ತೀನಿ: ಇನ್ಸ್ಪೆಕ್ಟರ್ ಧಮ್ಕಿ

