ಕೋಲಾರ: ಲಾರಿ ಪಲ್ಟಿಯಾಗಿ ರಸ್ತೆ ತುಂಬಾ ಈರುಳ್ಳಿ (Onion) ಹಾಗೂ ಬೆಳ್ಳುಳ್ಳಿ ಚೆಲ್ಲಾಡಿದ ಘಟನೆ ಕೆಜಿಎಫ್ನ (KGF) ವಡ್ಡರಹಳ್ಳಿ ಗ್ರಾಮದ ಬಳಿ ನಡೆದಿದೆ.
ಚೆನ್ನೈ – ಬೆಂಗಳೂರು (Bengaluru) ಎಕ್ಸ್ಪ್ರೆಸ್ ಹೈವೇಯಲ್ಲಿ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಚಿತ್ತೂರಿಗೆ ಈರುಳ್ಳಿ ಹಾಗೂ ಬೆಳ್ಳುಳ್ಳಿ ಕ್ಯಾಂಟರ್ನಲ್ಲಿ ಸಾಗಿಸಲಾಗುತ್ತಿತ್ತು. ಈ ವೇಳೆ ಹೆದ್ದಾರಿಯಲ್ಲಿ ಕ್ಯಾಂಟರ್ ಪಲ್ಟಿಯಾಗಿದೆ. ಇದನ್ನೂ ಓದಿ: ಹುಬ್ಬಳ್ಳಿ | ಗಣೇಶನನ್ನು ತರುವ ಮೆರವಣಿಗೆಯಲ್ಲಿ ಮಹಿಳೆಯರ ಜೊತೆ ಅಸಭ್ಯ ವರ್ತನೆ – ಕಿಡಿಗೇಡಿಗಳಿಗೆ ಪೊಲೀಸರಿಂದ ಲಾಠಿ ರುಚಿ
ಡ್ರೈವರ್ ಹಾಗೂ ಕ್ಲೀನರ್ ಪ್ರಾಣಾಪಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಬೇತಮಂಗಲ ಪೊಲೀಸರ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರು ಸ್ಥಳದಲ್ಲೇ ಬೀಡುಬಿಟ್ಟಿದ್ದು ಈರುಳ್ಳಿ ಕಳುವಾಗದಂತೆ ಎಚ್ಚರಿಕೆ ವಹಿಸಿದ್ದಾರೆ. ಇದನ್ನೂ ಓದಿ: Hassan | ಕೆಎಸ್ಆರ್ಟಿಸಿ ಬಸ್ ಚಾಲಕನ ನಿರ್ಲಕ್ಷ್ಯಕ್ಕೆ ಗೃಹಿಣಿ ಬಲಿ

