ರಾಮನಗರ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಇಂದು ಕನಕಪುರಕ್ಕೆ ಆಗಮಿಸಿದ್ದು, ಮಾರ್ಗಮಧ್ಯೆ ಬಿಸಿಎಂ ಹಾಸ್ಟೆಲ್ಗೆ (BCM Hostel) ದಿಢೀರ್ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಮಾತುಕತೆ ನಡೆಸಿದರು.
ನಾಳೆ ಕನಕಪುರದಲ್ಲಿ ಕುಟುಂಬದ ಖಾಸಗಿ ಕಾರ್ಯಕ್ರಮವಿರುವ ಹಿನ್ನೆಲೆ ಡಿ.ಕೆ.ಶಿವಕುಮಾರ್ ಇಂದು ಕನಕಪುರ ನಿವಾಸದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಬೆಂಗಳೂರಿನಿಂದ ಕನಕಪುರಕ್ಕೆ ಆಗಮಿಸುತ್ತಿದ್ದ ವೇಳೆ ಕನಕಪುರದ ಬಿಸಿಎಂ ಹಾಸ್ಟೆಲ್ಗೆ ಸಿಎಂ ದಿಢೀರ್ ಭೇಟಿ ನೀಡಿದರು. ಯಾವುದೇ ಪೂರ್ವ ಸೂಚನೆ ಇಲ್ಲದೆ ಹಾಸ್ಟೆಲ್ಗೆ ಭೇಟಿ ನೀಡಿದ ಸಿಎಂ, ಅಲ್ಲಿನ ವ್ಯವಸ್ಥೆಗಳನ್ನು ಪರಿಶೀಲಿಸಿದರು. ಇದನ್ನೂ ಓದಿ: ಒಮಾನ್ ಕರಾವಳಿಯಲ್ಲಿ ಭಾರತೀಯ ಸಿಬ್ಬಂದಿಯಿದ್ದ ಹಡಗಿನ ಮೇಲೆ ದಾಳಿ – 13 ಮಂದಿ ರಕ್ಷಣೆ, ಓರ್ವ ನಾಪತ್ತೆ

ಬಳಿಕ ಹಾಸ್ಟೆಲ್ನಲ್ಲೇ ಸಿಎಂ ಡಿ.ಕೆ. ಶಿವಕುಮಾರ್ ಮುದ್ದೆ ಊಟ ಸವಿದರು. ಬಳಿಕ ವಿದ್ಯಾರ್ಥಿಗಳೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ಹಾಸ್ಟೆಲ್ನಲ್ಲಿ ವ್ಯವಸ್ಥೆ ಬಗ್ಗೆ ವಿದ್ಯಾರ್ಥಿಗಳಿಂದಲೇ ಸಿಎಂ ಮಾಹಿತಿ ಪಡೆದುಕೊಂಡರು. ಇದನ್ನೂ ಓದಿ: ಸಿಕ್ಸರ್, ಬೌಂಡರಿಗಳ ಮಳೆ ಸುರಿಸಿದ ಶರ್ಮಾ- ಭಾರತಕ್ಕೆ ಗೆಲುವಿನ `ಅಭಿಷೇಕʼ

ಈ ವೇಳೆ ರಾಮನಗರ ಜಿಲ್ಲಾಧಿಕಾರಿ ಯಶವಂತ್ ವಿ. ಗುರುಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್ ಸೇರಿದಂತೆ ಅಧಿಕಾರಿಗಳು ಸಿಎಂಗೆ ಸಾಥ್ ನೀಡಿದರು. ಇದನ್ನೂ ಓದಿ: ಪಂಜಾಬ್ ಪೊಲೀಸ್ ಠಾಣೆಯಲ್ಲಿ ಸ್ಫೋಟ – 2 ಕಾರುಗಳ ಗಾಜು ಪುಡಿಪುಡಿ

