ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಪತ್ನಿ ಪಾರ್ವತಿ(Parvathi) ಅವರ ಬಹು ವರ್ಷಗಳ ಕನಸು ಕೊನೆಗೂ ನನಸಾಗಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಸ್ವಂತ ಮನೆಯೊಂದನ್ನು ನಿರ್ಮಿಸಬೇಕೆಂಬ ಪತ್ನಿಯ ಆಸೆಯಂತೆ ಸಿದ್ದರಾಮಯ್ಯ ಅವರು ನಿರ್ಮಿಸಿರುವ ನೂತನ ನಿವಾಸದ(House) ಗೃಹ ಪ್ರವೇಶ ಗಣೇಶ ಚತುರ್ಥಿ ಶುಭ ದಿನದಿಂದದ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಇಂದು ನೆರವೇರಿತು.
ಮೈಸೂರಿನ ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ 80*120 ಅಳತೆಯ ನಿವೇಶನದಲ್ಲಿ ಎರಡು ಅಂತಸ್ತಿನ ನೂತನ ಬಂಗಲೆಯನ್ನು ನಿರ್ಮಿಸಲಾಗಿದೆ.
ಯಾವುದೇ ಅಧಿಕೃತ ಪ್ರವಾಸ ಪಟ್ಟಿ ಇಲ್ಲದೆ ಮೈಸೂರಿಗೆ ಆಗಮಿಸಿರುವ ಸಿದ್ದರಾಮಯ್ಯ ಹಾಗೂ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಕುಟುಂಬಸ್ಥರೊಂದಿಗೆ ಪೂಜಾ ಕೈಂಕರ್ಯಗಳಲ್ಲಿ ಭಾಗಿಯಾದರು.

ನಿನ್ನೆ ರಾತ್ರಿ ನೂತನ ನಿವಾಸದಲ್ಲಿ ವಿವಿಧ ಧಾರ್ಮಿಕ ಪೂಜೆಗಳನ್ನು ನೆರವೇರಿಸಲಾಯಿತು. ಇಂದು ಬೆಳಗ್ಗೆಯೂ ಧಾರ್ಮಿಕ ವಿಧಿ-ವಿಧಾನಗಳನ್ನು ಪೂರೈಸಿ, ಕೇವಲ ಕುಟುಂಬಸ್ಥರು ಹಾಗೂ ಅತ್ಯಂತ ಆಪ್ತರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ಗೃಹ ಪ್ರವೇಶ ಮಾಡಲಾಯಿತು. ಇದನ್ನೂ ಓದಿ: ಮೈಸೂರು ದಸರಾ ಮಹೋತ್ಸವ – ಅರಮನೆಗೆ ಎರಡನೇ ಹಂತದ ಗಜಪಡೆ ಆಗಮನ

