ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಎಲ್ಲೆಂದರಲ್ಲಿ ಕಸ ಹಾಕುವವರಿಗೆ ಇನ್ಮುಂದೆ ಸಿಸಿಟಿವಿ ಕ್ಯಾಮೆರಾ ಕಣ್ಗಾವಲು ಬೀಳಲಿದೆ. ನಗರದಲ್ಲಿ ಕಸ ಹಾಕುವವರ ಮೇಲೆ ನಿಗಾ ಇಡಲು ಜಿಬಿಎ (GBA) ಮುಂದಾಗಿದ್ದು, ಸೇಫ್ ಸಿಟಿ ಯೋಜನೆಯಡಿ (Safe City Project) ಮತ್ತಷ್ಟು ಸಿಸಿಟಿವಿ (CCTV) ಕ್ಯಾಮೆರಾಗಳನ್ನ ಅಳವಡಿಸಲು ಪ್ಲಾನ್ ಮಾಡಿದೆ. ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಯೋಜನೆಯನ್ನ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸಲು ಸಿದ್ಧತೆ ನಡೆಸಿದೆ.
ಬೆಂಗಳೂರಿನಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆಗೆ ಮತ್ತಷ್ಟು ಆದ್ಯತೆ ನೀಡಲು ಜಿಬಿಎ ಮುಂದಾಗಿದೆ. ನಗರದ ಹಲವೆಡೆ ಎಲ್ಲೆಂದರಲ್ಲಿ ಕಸ ಹಾಕುವವರ ಮೇಲೆ ನಿಗಾ ಇಡಲು ಸಿಸಿಟಿವಿ ಕ್ಯಾಮೆರಾಗಳನ್ನ ಅಳವಡಿಸಲು ಯೋಜನೆ ರೂಪಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಹಾಕುವವರನ್ನ ಗುರುತಿಸಿ, ನಗರದ ಸ್ವಚ್ಛತೆ ಕಾಪಾಡಲು ಕ್ರಮ ಕೈಗೊಳ್ಳುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗುತ್ತಿದೆ. ಇನ್ನೂ ಜಿಬಿಎ ವ್ಯಾಪ್ತಿಯಲ್ಲಿ 7 ಸಾವಿರಕ್ಕೂ ಅಧಿಕ ಸಿಸಿಟಿವಿಗಳನ್ನ ಸರ್ಕಾರದ ವತಿಯಿಂದ ಆಳವಡಿಕೆ ಮಾಡಲಾಗಿದೆ. ಇದನ್ನೂ ಓದಿ: ಸೌದಿ ಅರೇಬಿಯಾದ ತೈಲ ಪೈಪ್ಲೈನ್ ಮೇಲೆಯೇ ದಾಳಿ – ಕಚ್ಚಾ ತೈಲ ದರ ಭಾರೀ ಏರಿಕೆ
ಮಹಿಳೆಯರ ಸುರಕ್ಷತೆಗೂ ಸಿಸಿಟಿವಿ ಕಣ್ಗಾವಲು:
ಪೊಲೀಸ್ ಇಲಾಖೆಯ ಸಮನ್ವಯದೊಂದಿಗೆ ಸೇಫ್ ಸಿಟಿ ಯೋಜನೆಯನ್ನ ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು ಜಿಬಿಎ ಪ್ಲಾನ್ ಮಾಡಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಸಿಸಿಟಿವಿ ಕಣ್ಗಾವಲು ಹೆಚ್ಚಿಸುವ ಮೂಲಕ ಸಾರ್ವಜನಿಕರ ಸುರಕ್ಷತೆಗೆ ಒತ್ತು ನೀಡಲು ಮುಂದಾಗಿದೆ. ಬೆಂಗಳೂರಿನಲ್ಲಿ ಸ್ವಚ್ಛತೆ ಹಾಗೂ ಸುರಕ್ಷತೆ ಎರಡಕ್ಕೂ ಆದ್ಯತೆ ನೀಡಲಾಗುತ್ತಿದೆ. ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಸೇಫ್ ಸಿಟಿ ಯೋಜನೆಯನ್ನ ಮತ್ತಷ್ಟು ಪರಿಣಾಮಕಾರಿಯಾಗಿ ಜಾರಿಗೊಳಿಸೋದಕ್ಕೆ ಸಚಿವರು ಕೂಡ ತಿಳಿಸಿದ್ದಾರೆ. ಪೊಲೀಸರ ನಿಗಾದಲ್ಲಿ ಸಿಸಿಟಿವಿಗಳು ಇರಲಿದ್ದು, ಅಗತ್ಯವಿರುವ ಕಡೆ ಇನ್ನೂ ಹೆಚ್ಚಿನ ಸಿಸಿಟಿವಿ ಅಳವಡಿಕೆ ಮಾಡಲು ಪ್ಲಾನ್ ಮಾಡಲಾಗುತ್ತಿದೆ ಎಂದು ಜಿಬಿಎ ಆಯುಕ್ತರು ಹೇಳಿದ್ದಾರೆ. ಇದನ್ನೂ ಓದಿ: ಹೋರಿಗಳ ಅದ್ದೂರಿ ಹುಟ್ಟುಹಬ್ಬದಲ್ಲಿ ಭಾಗಿಯಾದ ರೇಣುಕಾಚಾರ್ಯ
ಒಟ್ಟಿನಲ್ಲಿ ಬೆಂಗಳೂರಿನ ಸ್ವಚ್ಛತೆ ಹಾಗೂ ಸುರಕ್ಷತೆಗೆ ಜಿಬಿಎ ಹೊಸ ಹೆಜ್ಜೆ ಇಡಲು ಮುಂದಾಗಿದೆ. ಕಸ ಹಾಕುವವರಿಗೆ ಕ್ಯಾಮೆರಾ ಕಣ್ಣು ಬೀಳಲಿದ್ದು, ಮಹಿಳೆಯರ ಸುರಕ್ಷತೆಗೂ ಸಿಸಿಟಿವಿ ಕಣ್ಗಾವಲು ಹೆಚ್ಚಾಗಲಿದೆ. ಇದನ್ನೂ ಓದಿ: ಗಣೇಶ ಚತುರ್ಥಿಯಂದೇ ಮಗನ ಹೆಸರು ರಿವೀಲ್ ಮಾಡಿದ ಡಾಲಿ

