ಬಿಗ್ ಬಾಸ್ ಕನ್ನಡ ಸೀಸನ್ 13ರ ಕಂಟೆಸ್ಟಂಟ್ ಹಾಗೂ ನಿರ್ದೇಶಕ ಓಂ ಪ್ರಕಾಶ್ ರಾವ್ (Om Prakash Rao) ಅವರು ದಿಢೀರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿಗ್‌ಬಾಸ್ ಮನೆಯಿಂದಲೇ ಸಿಬ್ಬಂದಿ ಅವರನ್ನು ಆಸ್ಪತ್ರೆಗೆ ಕರೆದೊಯ್ದು ದಾಖಲಿಸಿದ್ದಾರೆ ಎಂದು ತಿಳಿದುಬಂದಿದೆ.
ಈ ಹಿಂದೆ ಓಂ ಪ್ರಕಾಶ್ ರಾವ್ ಅವರಿಗೆ ಅಪಘಾತವಾಗಿತ್ತು. ಈ ವೇಳೆ ಅವರ ಕಾಲಿಗೆ ಬಲವಾದ ಪೆಟ್ಟಾಗಿತ್ತು. ಇದೀಗ ಅದೇ ಕಾಲಿನಲ್ಲಿ ಮತ್ತೆ ಊತ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನ ಆಸ್ಪತ್ರೆಗೆ (Hospital) ದಾಖಲಿಸಲಾಗಿದೆ ಎಂದು ಬಿಗ್ ಬಾಸ್ ಟೀಮ್ ಮೂಲಗಳು ʻಪಬ್ಲಿಕ್ ಟಿವಿʼಗೆ ತಿಳಿಸಿವೆ.

ಬಿಗ್‌ಬಾಸ್ (Bigg Boss) ಮನೆಯಲ್ಲಿ ವಿಶ್ರಾಂತಿ ರಹಿತವಾಗಿ ಟಾಸ್ಕ್ ನಲ್ಲಿ ಭಾಗಿಯಾದ ಪರಿಣಾಮ ಕಾಲಿನ ನೋವು ಕಾಣಿಸಿಕೊಂಡಿದೆ. ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಗಾಗಿ ಸಿಬ್ಬಂದಿ ಅವರನ್ನ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಚಿಕಿತ್ಸೆ ಪಡೆದು ಮತ್ತೆ ಬಿಗ್ ಮನೆಗೆ ತೆರಳಲು ಸಿದ್ಧವಿದ್ದಾರೆ ಎನ್ನುತ್ತಿವೆ ಬಿಗ್‌ಬಾಸ್ ಟೀಮ್ ಮೂಲಗಳು.
ಆದ್ರೆ ಓಂ ಪ್ರಕಾಶ್ ರಾವ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಅಧಿಕೃತವಾಗಿ ಲಭ್ಯವಾಗಬೇಕಿದೆ.

