– ಬಿಗ್ ಬಾಸ್ ಸೀಸನ್ 4ರಲ್ಲೂ ಹೊರಬಂದಿದ್ದ ನಿರ್ದೇಶಕ
ಕಾಲು ನೋವು ಕಾಣಿಸಿಕೊಂಡ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದ ಬಿಗ್ ಬಾಸ್ ಸೀಸನ್ 13ರ ಸ್ಪರ್ಧಿ ಹಾಗೂ ನಿರ್ದೇಶಕ ಓಂ ಪ್ರಕಾಶ್ ರಾವ್ ಬಿಗ್ ಬಾಸ್ ಮನೆಯಲ್ಲಿ ಅರ್ಧಕ್ಕೆ ಆಟ ನಿಲ್ಲಿಸಿ ಮನೆಯಿಂದ ಹೊರಬಂದಿದ್ದಾರೆ.
ಓಂ ಪ್ರಕಾಶ್ ರಾವ್ ಬಿಗ್ ಬಾಸ್ ಮನೆಯಿಂದ ಹೊರನಡೆದ ಕುರಿತು ಕಲರ್ಸ್ ಕನ್ನಡ ವಾಹಿನಿ ಅಧಿಕೃತ ಪೋಸ್ಟ್ ಹಂಚಿಕೊAಡಿದೆ. ಸೋಮವಾರ ಓಂ ಪ್ರಕಾಶ್ ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಹಿನ್ನೆಲೆ ಬಿಗ್ ಬಾಸ್ ಮನೆಯಿಂದ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಈ ಹಿಂದೆ ಓಂ ಪ್ರಕಾಶ್ ರಾವ್ ಅವರಿಗೆ ಅಪಘಾತವಾಗಿತ್ತು. ಈ ವೇಳೆ ಅವರ ಕಾಲಿಗೆ ಬಲವಾದ ಪೆಟ್ಟಾಗಿತ್ತು. ಇದೀಗ ಅದೇ ಕಾಲಿನಲ್ಲಿ ಮತ್ತೆ ಊತ ಕಾಣಿಸಿಕೊಂಡ ಹಿನ್ನೆಲೆ ಬಿಡದಿಯ ಕಾಡುಮನೆ ಎಸ್ಟೇಟ್ ಬಳಿ ಇರುವ `ಆರಾಧ್ಯ’ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದು ದಾಖಲಿಸಿದ್ದರು. ಅಲ್ಲಿಂದ ಶೋ ಬಿಡುವ ನಿರ್ಧಾರ ಮಾಡಿದ್ದಾರೆ.
ಬಿಗ್‌ಬಾಸ್ ಮನೆಯಲ್ಲಿ ವಿಶ್ರಾಂತಿ ರಹಿತವಾಗಿ ಟಾಸ್ಕ್ನಲ್ಲಿ ಭಾಗಿಯಾದ ಪರಿಣಾಮ ಕಾಲಿನ ನೋವು ಕಾಣಿಸಿಕೊಂಡಿದೆ. ಹೆಚ್ಚಿನ ಚಿಕಿತ್ಸೆ ಹಾಗೂ ವೈದ್ಯಕೀಯ ತಪಾಸಣೆಗಾಗಿ ಸಿಬ್ಬಂದಿ ಅವರನ್ನ ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಓಂ ಪ್ರಕಾಶ್ ರಾವ್ ಅವರ ಆರೋಗ್ಯ ಸ್ಥಿತಿ ಹೇಗಿದೆ ಎಂಬ ಬಗ್ಗೆ ಹೆಚ್ಚಿನ ಮಾಹಿತಿ ಅಧಿಕೃತವಾಗಿ ಲಭ್ಯವಾಗಬೇಕಿದೆ.
ಓಂ ಪ್ರಕಾಶ್ ರಾವ್ ಬಿಗ್ ಬಾಸ್ ಸೀಸನ್-4ರಲ್ಲೂ ಸಹ ಹೀಗೆ ಆನಾರೋಗ್ಯದಿಂದ ಶೋನಲ್ಲಿನ ತಮ್ಮ ಜರ್ನಿಯನ್ನ ಅರ್ಧಕ್ಕೆ ನಿಲ್ಲಿಸಿದ್ದರು. ಇದು ಅವರಿಗೆ ಸೆಕೆಂಡ್ ಚಾನ್ಸ್ ಎಂದು ಕಿಚ್ಚ ಸುದೀಪ್ ಹೇಳಿ ಬಿಗ್ ಮನೆಗೆ ವೇದಿಕೆಯಿಂದ ಬೀಳ್ಕೊಟ್ಟಿದ್ದಾರು. ಆದರೆ, ಈ ಬಾರಿ ಕೂಡ ಅನಾರೋಗ್ಯದ ಕಾರಣ ಆಸ್ಪತ್ರೆಗೆ ದಾಖಲಾಗಿ, ಅಲ್ಲಿಂದ ಸೀದಾ ತಮ್ಮ ಮನೆ ಕಡೆ ಪ್ರಯಾಣ ಬೆಳೆಸಿದ್ದಾರೆ.

