ಮೈಸೂರು: ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಅವರು ನಗರದಲ್ಲಿ (Mysuru) ಕಾಂಗ್ರೆಸ್ (Congress) ಕಚೇರಿ ಕಟ್ಟಡ ಕಾಮಗಾರಿ ಪರಿಶೀಲಿಸಿದರು. ಈ ವೇಳೆ ಅಭಿಮಾನಿಗಳು ಸಿದ್ದರಾಮಯ್ಯ ಶಾಶ್ವತ ಮುಖ್ಯಮಂತ್ರಿ ಎಂದು ಘೋಷಣೆ ಕೂಗಿದ್ದಾರೆ.
ಮೈಸೂರು ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಬಿ.ಜೆ ವಿಜಯಕುಮಾರ್ ಅವರು ಘೋಷಣೆ ಕೂಗಿದ್ದಾರೆ. ಸನ್ಮಾನ ಮಾಡುವ ವೇಳೆ ಶಾಶ್ವತ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಅವರು ಘೋಷಣೆ ಕೂಗಿದರು. ಈ ವೇಳೆ 2028 ಕ್ಕೂ ಸಿದ್ದರಾಮಯ್ಯ ಮುಖ್ಯಮಂತ್ರಿ ಎಂದು ಕೈ ಕಾರ್ಯಕರ್ತರು ಘೋಷಣೆ ಕೂಗಿದ್ದಾರೆ. ಇದನ್ನೂ ಓದಿ: ಇನ್ಸ್ಪೆಕ್ಟರ್ ಮಾಡಬಾರದ್ದು ಏನು ಮಾಡಿಲ್ಲ, ಪೊಲೀಸ್ ಲಾಂಗ್ವೇಜ್ನಲ್ಲಿ ಹೇಳಿದ್ದಾರೆ; ಡಿಕೆಶಿ

ಮೈಸೂರಿನ ರೈಲ್ವೆ ನಿಲ್ದಾಣದ ಬಳಿ ಕಾಂಗ್ರೆಸ್ ಕಚೇರಿ ನಿರ್ಮಾಣ ಕಾಮಗಾರಿ ನಡೆಯುತ್ತಿದೆ. ಕಾಮಗಾರಿ ಪರಿಶೀಲನೆ ಮಾಡಿ ಸಿದ್ದರಾಮಯ್ಯ ಅವರು ಅಲ್ಲಿಂದ ತೆರಳಿದ್ದಾರೆ. ಇದನ್ನೂ ಓದಿ: 2 ವರ್ಷದಿಂದ ಆ ಹುಡುಗ ಜೈಲಲ್ಲಿದ್ದಾನೆ, KPSC, ನೈಸ್ ವಿಷಯ ಬಂದಾಗ ಮೊಬೈಲ್ ಸಿಕ್ಕಿದ್ದು ಹೇಗೆ? – ಡಿಕೆಶಿ ವಿರುದ್ಧ ಹೆಚ್ಡಿಕೆ ವಾಗ್ದಾಳಿ

