ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಸಂಜೆ ಜೋರು ಸುರಿದಿದೆ. ರಸ್ತೆಗಳು ಜಲಾವೃತವಾಗಿದ್ದು, ವಾಹನ ಸವಾರರು ಪರದಾಡುವಂತಾಯಿತು.
ಯಶವಂತಪುರ ಸರ್ಕಲ್, ವಿಜಯನಗರ, ರಾಜಾಜಿನಗರ, ಬಸವೇಶ್ವರ ನಗರ, ಎಂಜಿ ರೋಡ್, ಕಾರ್ಪೋರೇಷನ್ ಸರ್ಕಲ್, ಮೈಸೂರು ಬ್ಯಾಂಕ್ ಸರ್ಕಲ್, ಮೆಜೆಸ್ಟಿಕ್ ಸುತ್ತಮುತ್ತ ಜೋರಾಗಿ ಮಳೆ ಸುರಿದಿದೆ.
ಕೆಆರ್ ಸರ್ಕಲ್ನಿಂದ ವಿಧಾನಸೌಧ, ಎಂಎಸ್ ಬಿಲ್ಡಿಂಗ್ ಕಡೆ ಹೋಗುವ ಮಾರ್ಗ ಜಲಾವೃತವಾಗಿದೆ. ರಸ್ತೆಗಳು ಕೆರೆಯಂತಾಗಿವೆ. ವಾಹನ ಚಾಲಕರು ಹೈರಾಣಾಗಿದ್ದಾರೆ.
17 ಜಿಲ್ಲೆಗಳಲ್ಲಿ ಗುಡುಗು-ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿತ್ತು.
ಯೆಲ್ಲೋ ಅಲರ್ಟ್ ಜಿಲ್ಲೆಗಳು
ಚಾಮರಾಜನಗರ, ಕೊಡಗು, ಮೈಸೂರು, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ದಾವಣಗೆರೆ.

