ಫಸ್ಟ್ ರ‍್ಯಾಂಕ್ ರಾಜು ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್(Gurunandan) ನಾಯಕರಾಗಿ ನಟಿಸಿರುವ, ಸುಮಂತ್ ಗೌಡ ನಿರ್ದೇಶನದ ಹಾಗೂ ಮಂಡಿಮನೆ ಟಾಕೀಸ್ ಲಾಂಛನದಲ್ಲಿ ಗುರುನಂದನ್ ಅವರು ತಮ್ಮ ಸ್ನೇಹಿತರೊಡಗೂಡಿ ನಿರ್ಮಾಣ ಮಾಡಿರುವ MR ಜಾಕ್(MR Jack) ಚಿತ್ರದ ಮೊದಲ ಹಾಡು ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಅನಾವರಣವಾಗಿದೆ.
ನಿರ್ದೇಶಕ ಸುಮಂತ್ ಗೌಡ ಅವರೆ ಬರೆದಿರುವ ಈ ಹಾಡನ್ನು ಹೆಸರಾಂತ ಗಾಯಕ ಎಂ.ಸಿ.ಬಿಜ್ಜು ಹಾಡಿದ್ದಾರೆ. ಕಿರಣ್ ರವೀಂದ್ರನಾಥ್ ಸಂಗೀತ ಸಂಯೋಜಿಸಿದ್ದಾರೆ. ಇದು ಚಿತ್ರದ ಮೊದಲ ಹಾಗೂ ನಾಯಕನ ಪರಿಚಯದ ಗೀತೆಯಾಗಿದೆ. ಹಾಡು ಬಿಡುಗಡೆಯಾದ ಕ್ಷಣದಿಂದಲೇ ಅಪಾರ ಮೆಚ್ಚುಗೆ ವ್ಯಕ್ತವಾಗಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಇದನ್ನೂಓದಿ: ಎಂ.ಎಸ್. ಸುಬ್ಬುಲಕ್ಷ್ಮಿ ಬಯೋಪಿಕ್‌ಗೆ ರಶ್ಮಿಕಾ ಮಂದಣ್ಣ ನಾಯಕಿ
MR ಜಾಕ್ ಚಿತ್ರದಲ್ಲಿ ಹಾಸ್ಯವೇ ಪ್ರಧಾನ. ಎಮೋಷನ್ ಸಹ ಇದೆ. ಅಷ್ಟೇ ಅಲ್ಲ. ಈಗಿನ ಜನರು ಬಯಸುವ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಗುರುನಂದನ್ ಅವರಿಗೆ ನಾಯಕಿಯಾಗಿ ತಪಸ್ವಿನಿ ಪೂಣಚ್ಛ ಅಭಿನಯಿಸಿದ್ದಾರೆ. ಮಿತ್ರ, ಗೋಪಾಲಕೃಷ್ಣ ದೇಶಪಾಂಡೆ, ಅರವಿಂದ್, ಧರ್ಮಣ್ಣ, ಸುಶ್ಮಿತ ಜಗ್ಗಪ್ಪ ಮುಂತಾದವರು ತಾರಾಬಳಗದಲ್ಲಿದ್ದಾರೆ. ಶಿವಸೇನ ಛಾಯಾಗ್ರಾಹಕರಾಗಿ, ಕಿರಣ್ ರವೀಂದ್ರನಾಥ್ ಸಂಗೀತ ನಿರ್ದೇಶಕರಾಗಿ ಹಾಗೂ ವಿಜಯ್ ರಾಜ್ ಸಂಕಲನಕಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಈಗಾಗಲೇ ಬಿಡುಗಡೆಯಾಗಿರುವ ಟೀಸರ್‌ಗೂ ಪ್ರಶಂಸೆ ವ್ಯಕ್ತವಾಗಿದೆ. ಅಕ್ಟೋಬರ್ ನಲ್ಲಿ ಚಿತ್ರವನ್ನು ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ.

