ಬೆಂಗಳೂರು: ತಿಹಾರ್ ಜೈಲಿನಲ್ಲಿರುವ ಆರೋಪಿ ಉಮರ್ ಖಾಲೀದ್‌ನನ್ನು `ರಾಷ್ಟ್ರೀಯವಾದಿ’ ಎಂದು ಕರೆದಿರುವ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ವಿರುದ್ಧ ದೂರು ದಾಖಲಾಗಿದೆ.
ಹಿಂದೂ ಸಂಘಟನೆಯ ತೇಜಸ್‌ಗೌಡ ಎಂಬವರು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಇದನ್ನೂ ಓದಿ: ಉಮರ್ ಖಾಲಿದ್ ರಾಷ್ಟ್ರೀಯವಾದಿ: ಬಿ.ಕೆ.ಹರಿಪ್ರಸಾದ್ ವಿವಾದ
ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯ ಚಿತ್ರ ಪ್ರದರ್ಶನಕ್ಕೆ ಎಬಿವಿಪಿ ವಿರೋಧ ವ್ಯಕ್ತಪಡಿಸಿದ್ದಕ್ಕೆ ಹರಿಪ್ರಸಾದ್ ಅವರು ಅಸಮಾಧಾನ ಹೊರಹಾಕಿದ್ದರು. ಉಮರ್ ಖಾಲಿದ್ ರಾಷ್ಟ್ರೀಯವಾದಿ. ಎಬಿವಿಪಿಗೆ ಉಮರ್ ಖಾಲಿದ್ ಬಗ್ಗೆ ಮಾತನಾಡಲು ಯಾವುದೇ ಹಕ್ಕಿಲ್ಲ ಅಂತ ಗುಡುಗಿದ್ದರು.
ಎಬಿವಿಪಿ ನಾಥೂರಾಮ್ ಗೋಡ್ಸೆಯನ್ನು ಆರಾಧಿಸುತ್ತದೆ. ನಾಥೂರಾಮ್ ಗೋಡ್ಸೆ ದೇಶ ವಿರೋಧಿ ದೇಶದ ಮೊದಲ ಭಯೋತ್ಪಾದಕ. ಉಮರ್ ಖಾಲಿದ್ ಬಗ್ಗೆ ಮಾತನಾಡಲು ಎವಿವಿಪಿ ಅವರಿಗೆ ಯಾವುದೇ ನೈತಿಕತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದರು.

