ಕೋಲ್ಕತ್ತಾ: ಮಾಜಿ ಸಿಎಂ ಮಮತಾ ಬ್ಯಾನರ್ಜಿ (Mamata Banerjee) ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ( Milan Pradhan) ಅವರನ್ನು ಅರೆಸ್ಟ್ ಮಾಡಲಾಗಿದೆ.
ಹಳೆಯ ಕೊಲೆ ಕೇಸ್‌ವೊಂದರ ಸಂಬಂಧ ಇದೀಗ ಕಾಂಗ್ರೆಸ್ (Congress) ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮಮತಾ ಟಿಎಂಸಿ ಬಣದ ಅಭ್ಯರ್ಥಿ ಯೂಟರ್ನ್ – ನಂದಿಗ್ರಾಮ ಉಪಚುನಾವಣೆ ನಾಮಪತ್ರ ವಾಪಸ್
ಅ.6ರಂದು ನಡೆಯಲಿರುವ ನಂದಿಗ್ರಾಮ ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಿಲನ್ ಪ್ರಧಾನ್ ಕಣಕ್ಕಿಳಿದಿದ್ದರು. ಈ ವೇಳೆ ಪ್ರಧಾನ್ ಅವರಿಗೆ ತಮ್ಮ ಬಣ ಬೆಂಬಲ ಸೂಚಿಸುವುದಾಗಿ ಮಮತಾ ಬ್ಯಾನರ್ಜಿ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಈ ಬೆಳವಣಿಗೆ ನಡೆದಿದೆ.
ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಸುವೇಂದು ಅಧಿಕಾರಿ ಭೇಟಿ ಬಳಿಕ ಟಿಎಂಸಿ ಬಣದ ಅಭ್ಯರ್ಥಿ ಸಂಚಿತಾ ದೇ ಪ್ರಧಾನ ತಮ್ಮ ನಾಮಪತ್ರ ವಾಪಸ್ ಪಡೆದ ಬಳಿಕ ತಮ್ಮ ಕಾಳಿಘಾಟ್ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಈ ವೇಳೆ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿಯನ್ನು ತಮ್ಮ ಬಣ ಬೆಂಬಲಿಸಲಿದೆ ಎಂದು ಘೋಷಿಸಿದ್ದರು.

