ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ (Short Circuit) ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದ ಘಟನೆ ಲಾಲ್‌ಬಾಗ್ ಬಳಿಯ ಸುಧಾಮನಗರದಲ್ಲಿ (Sudhama Nagar) ನಡೆದಿದೆ.
ಕಟ್ಟಡದ ನಾಲ್ಕನೇ ಫ್ಲೋರ್‌ನಲ್ಲಿ ಪೈಂಟ್ ಡಬ್ಬಿಗಳನ್ನು ಶೇಖರಿಸಿ ಇಡಲಾಗಿತ್ತು. ಶಾರ್ಟ್ ಸರ್ಕ್ಯೂಟ್‌ನಿಂದ ಡಬ್ಬಗಳಿಗೆ ಬೆಂಕಿ ಹೊತ್ತಿಕೊಂಡಿದೆ. ತಕ್ಷಣವೇ ಸ್ಥಳಕ್ಕೆ ಎರಡು ಅಗ್ನಿ ಶಾಮಕ ವಾಹನಗಳು ತೆರಳಿ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ತೊಡಗಿವೆ. ಇದನ್ನೂ ಓದಿ: ಶ್ರೀಗಂಧ ಮರ ತುಂಡರಿಸಿ ಕದ್ದೊಯ್ದ ದುಷ್ಕರ್ಮಿಗಳು – ಅರಣ್ಯ ಇಲಾಖೆ ನರ್ಸರಿ ಮುಂಭಾಗವೇ ಕೃತ್ಯ
ಘಟನೆಯಲ್ಲಿ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ. ಘಟನಾ ಸ್ಥಳದಲ್ಲಿ ಸ್ಥಳೀಯ ಪೊಲೀಸರಿಂದ ಪರಿಶೀಲನೆ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡಿದ್ದು ಐತಿಹಾಸಿಕ ಕ್ರಮ: ತಾರಾನಾಥ ಗಟ್ಟಿ ಕಾಪಿಕಾಡ್

