ನವದೆಹಲಿ: ತೃಣಮೂಲ ಕಾಂಗ್ರೆಸ್ ಪಕ್ಷದ (TMC) ಅಧಿಕೃತ ಹೆಸರು ಮತ್ತು ಚುನಾವಣಾ ಚಿಹ್ನೆ ಬಳಕೆಗೆ ತಡೆ ನೀಡಿರುವ ಚುನಾವಣಾ ಆಯೋಗದ (Election Commission Of India) ಆದೇಶವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜ (Mamata Banerjee) ಸುಪ್ರೀಂಕೋರ್ಟ್ (Supreme Court) ಮೊರೆ ಹೋಗಿದ್ದಾರೆ.
ಟಿಎಂಸಿ (TMC) ಪಕ್ಷದ ಹೆಸರು ಮತ್ತು ಪಕ್ಷದ ಸಾಂಪ್ರದಾಯಿಕ ‘ಹೂವು ಮತ್ತು ಹುಲ್ಲು’ ಚಿಹ್ನೆಯನ್ನು ಬಳಸುವುದನ್ನು ಎರಡೂ ಬಣಗಳಿಗೆ ನಿರ್ಬಂಧಿಸಿ ಚುನಾವಣಾ ಆಯೋಗ ಸೆಪ್ಟೆಂಬರ್ 17ರಂದು ಮಧ್ಯಂತರ ಆದೇಶ ಹೊರಡಿಸಿತ್ತು. ಈ ಆದೇಶದ ವಿರುದ್ಧ ಮಮತಾ ಬ್ಯಾನರ್ಜಿ ಅವರು ತಮ್ಮ ವಕೀಲ ಅಭಿನವ್ ಸಿಂಗ್ ಅವರ ಮೂಲಕ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಚುನಾವಣಾ ಆಯೋಗದ ಮಧ್ಯಂತರ ಆದೇಶವನ್ನು ಪ್ರಶ್ನಿಸಲಾಗಿದೆ. ಇದನ್ನೂ ಓದಿ: ‘ಹೊಸ ಚಿಹ್ನೆಯೊಂದಿಗೆ ಜನರ ಬಳಿ ಹೋಗ್ತೀನಿ – ಮತ್ತೆ ಯೂಟರ್ನ್ ಹೊಡೆದ ಮಮತಾ ಅಭ್ಯರ್ಥಿ
ಪಕ್ಷದ ಹೆಸರು, ಚಿಹ್ನೆ ಹಾಗೂ ಸಂಘಟನಾ ನಿಯಂತ್ರಣದ ಮೇಲೆ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ರಿತಬ್ರತ ಬ್ಯಾನರ್ಜಿ ನೇತೃತ್ವದ ಬಣ ಹಕ್ಕು ಮಂಡಿಸಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ.
ಚುನಾವಣಾ ಆಯೋಗದ ಮಧ್ಯಂತರ ವ್ಯವಸ್ಥೆಯಂತೆ, ಮಮತಾ ಬ್ಯಾನರ್ಜಿ ನೇತೃತ್ವದ ಬಣಕ್ಕೆ ‘ಮಮತಾ ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್’ ಎಂಬ ಹೆಸರು ಹಾಗೂ ‘ಫುಟ್ಬಾಲ್ ಆಟಗಾರ’ ಚಿಹ್ನೆ ನೀಡಲಾಗಿದೆ. ಮತ್ತೊಂದು ಬಣಕ್ಕೆ ‘ಡೆಮಾಕ್ರಟಿಕ್ ತೃಣಮೂಲ ಕಾಂಗ್ರೆಸ್’ ಎಂಬ ಹೆಸರು ಮತ್ತು ‘ಲಕೋಟೆ’ ಚಿಹ್ನೆ ಹಂಚಿಕೆ ಮಾಡಲಾಗಿದೆ.
ಅಕ್ಟೋಬರ್ 6ರಂದು ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿರುವ ಹಿನ್ನೆಲೆ ಆಯೋಗದ ಈ ಮಧ್ಯಂತರ ವ್ಯವಸ್ಥೆ ಮಹತ್ವ ಪಡೆದಿದೆ. ಈ ಉಪಚುನಾವಣೆಗಳಿಗಾಗಿ ಎರಡೂ ಬಣಗಳು ಹೊಸ ಹೆಸರು ಹಾಗೂ ಚಿಹ್ನೆಗಳನ್ನು ಬಳಸಬೇಕಾಗಿದೆ.ಇದನ್ನೂ ಓದಿ: ಮಮತಾಗೆ ಮತ್ತೊಂದು ಶಾಕ್ – ರೆಜಿನಗರ ಕ್ಷೇತ್ರದ ಅಭ್ಯರ್ಥಿ ಕಣದಿಂದ ಔಟ್!

