ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತವಾಗುವ ಸಾಧ್ಯತೆಯಿರುವುದರಿಂದ ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (Weather Report) ಮುನ್ಸೂಚನೆ ನೀಡಿದೆ.
ಬೆಂಗಳೂರು ಸೇರಿದಂತೆ ಉತ್ತರ ಒಳನಾಡು, ದಕ್ಷಿಣ ಒಳನಾಡು ಹಾಗೂ ಕರಾವಳಿಯಲ್ಲಿ ಇಂದಿನಿಂದ ಸೆ.24ರವರೆಗೆ ಮಳೆಯಾಗುವ ಸಂಭವವಿದ್ದು, ಯೆಲ್ಲೋ ಅಲರ್ಟ್ ಘೋಷಿಲಾಗಿದೆ. ಇದನ್ನೂ ಓದಿ:TMC ಹೆಸರು, ಚಿಹ್ನೆ ಬಳಕೆಗೆ ತಡೆ – ಚುನಾವಣಾ ಆಯೋಗ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಮಮತಾ
ಕರಾವಳಿ ಜಿಲ್ಲೆಗಳು, ಬೆಳಗಾವಿ, ಗದಗ, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲ್ಬುರ್ಗಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

