ಭೋಪಾಲ್: ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳದಲ್ಲಿ ಕಾರು ಕೊಚ್ಚಿ ಹೋಗಿ ಎಂಟು ಮಂದಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ (Madhya Pradesh) ಅಗರ್ಮಾಲ್ವಾ ಜಿಲ್ಲೆಯ ಮಾ ಬಾಗ್ಲಾಮುಖಿ ದೇವಸ್ಥಾನದ (Ma Baglamukhi) ನಡೆದಿದೆ.
ಅವಘಡದಲ್ಲಿ ಓಡಿಶಾ (Odisha) ಮೂಲದ ಇಬ್ಬರು ಮಹಿಳೆಯರು, ಮೂವರು ಪುರುಷರು ಹಾಗೂ ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ಮೃತರೆಲ್ಲರು ಉಜ್ಜಯಿನಿಯಿಂದ ಮಾ ಬಾಗ್ಲಾಮುಖಿ ದೇವಸ್ಥಾನಕ್ಕೆ ಭೇಟಿ ನೀಡಲು ಆಗಮಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಒಂದು ವರ್ಷದಿಂದ ಭಾರತೀಯ ನೌಕಾ ಅಕಾಡೆಮಿಯಲ್ಲಿ ಕೆಲಸ ಮಾಡಿಕೊಂಡಿದ್ದ ಬಾಂಗ್ಲಾ ಪ್ರಜೆ ಅರೆಸ್ಟ್
ಪ್ರಾಥಮಿಕ ಮಾಹಿತಿ ಪ್ರಕಾರ, ಚಾಲಕ ಆತುರದಲ್ಲಿ ಹೊಳೆ ದಾಟಲು ಯತ್ನಿಸಿದ್ದು, ಈ ಅವಘಡಕ್ಕೆ ಕಾರಣ ಎನ್ನಲಾಗಿದೆ.
ಘಟನೆಯ ಬಳಿಕ ಸ್ಥಳಕ್ಕೆ ರಕ್ಷಣಾ ತಂಡಗಳು ಧಾವಿಸಿದ್ದು, ಮೃತದೇಹಗಳನ್ನು ಹೊರತೆಗೆಯುವ ಕಾರ್ಯದಲ್ಲಿ ತೊಡಗಿಕೊಂಡಿದ್ದಾರೆ. ಸದ್ಯ ಪೊಲೀಸರು ಮೃತರ ಗುರುತುಗಳನ್ನು ಪತ್ತೆ ಹಚ್ಚುತ್ತಿದ್ದಾರೆ.ಇದನ್ನೂ ಓದಿ: ಮಡಿಕೇರಿ ದಸರಾಗೆ ಮತ್ತೆ ದಿನಾಂಕ ಗೊಂದಲ – ದೈವಪ್ರಶ್ನೆ ಮೂಲಕ ಸಮಸ್ಯೆ ಬಗೆಹರಿಸಲು ಕರಗ ಅರ್ಚಕರ ಒತ್ತಾಯ

