ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ (Jammu Kashmir) ರಾಂಬನ್ ಜಿಲ್ಲೆಯಲ್ಲಿ ಶನಿವಾರ ಗಡಿ ಭದ್ರತಾ ಪಡೆಯ (BSF) ಸಿಬ್ಬಂದಿ ಪ್ರಯಾಣಿಸುತ್ತಿದ್ದ ವಾಹನವೊಂದು ಪಲ್ಟಿಯಾಗಿ ಐವರು ಗಾಯಗೊಂಡಿದ್ದಾರೆ.
ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಎಸ್‌ಐ ಘರ್ ಸಿಂಗ್, ಕಾನ್‌ಸ್ಟೆಬಲ್‌ಗಳಾದ ಸುನಿಲ್ ಕುಮಾರ್, ಪಾರ್ಶುತಮ್ ಕುಮಾರ್, ಚಂದನ್ ಯಾದವ್ ಅವರಿಗೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ಮಳೆಯಿಂದ ಉಕ್ಕಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋದ ಕಾರು – ಮೂವರು ಮಕ್ಕಳು ಸೇರಿ 8 ಮಂದಿ ಸಾವು
ಬಿಎಸ್‌ಎಫ್ ಬೆಂಗಾವಲಿನ ವಾಹನ ಜಮ್ಮು ಕಡೆಗೆ ತೆರಳುತ್ತಿತ್ತು. ಸ್ಥಳಕ್ಕೆ ಪೊಲೀಸರು, ರಕ್ಷಣಾ ತಂಡಗಳು ಭೇಟಿ ನೀಡಿ ಪರಿಶೀಲನೆ ನಡೆಸಿವೆ. ಉತ್ತರ ಕಾಶ್ಮೀರದ ಕುಪ್ವಾರ ಜಿಲ್ಲೆಯ ನಿವಾಸಿಯಾಗಿರುವ ಚಾಲಕನ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

