ಬೆಂಗಳೂರು: ವ್ಹೀಲಿಂಗ್ ಪುಂಡರ ಹುಚ್ಚಾಟಕ್ಕೆ ಭೀಕರ ರಸ್ತೆ ಅಪಘಾತವಾಗಿದ್ದು, (Accident) ಓರ್ವ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದ ಮಹದೇಶ್ವರ ದೇವಸ್ಥಾನದ (Bengaluru) ಬಳಿ ನಡೆದಿದೆ.
ನಿನ್ನೆ ಮಧ್ಯರಾತ್ರಿ ದೇವಸ್ಥಾನದ ಬಳಿಯ ರಿಂಗ್ ರಸ್ತೆಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದವರಿಂದ ತಪ್ಪಿಸಲು ಹೋಗಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಟಿಟಿ ವಾಹನ ಡಿಕ್ಕಿ ಹೊಡೆದಿದೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ಸೇತುವೆಯಿಂದ ಕೆಳಗೆ ಬಿದ್ದ BMW ಕಾರು – ಮೂವರು ದುರ್ಮರಣ
ಓರ್ವ ಯುವಕ ಸ್ಥಳದಲ್ಲೆ ದಾರುಣವಾಗಿ ಮೃತಪಟ್ಟಿದ್ದಾನೆ ಹಾಗೂ ಚಾಲಕ ಸೇರಿ ಐವರು ತೀವ್ರವಾಗಿ ಗಾಯಗೊಂಡಿದ್ದಾರೆ. ತಕ್ಷಣವೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೃತ ಮನೋಜ್ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.ಇದನ್ನೂ ಓದಿ: ದೊಡ್ಮನೆ ಮಂದಿಗೆ ಶಾಕ್ – ಕರುನಾಡಿನ ಜನತೆ, ಬಿಗ್ ಬಾಸ್ ವೀಕ್ಷಕರಿಗೆ ಕಿಚ್ಚನ ಚಪ್ಪಾಳೆ

