ಹುಬ್ಬಳ್ಳಿ: ಗ್ಯಾಸ್ ಲೀಕ್ ಆಗಿ ಸಿಲಿಂಡರ್ ಬ್ಲಾಸ್ಟ್ (Cylinder Blast) ಆದ ಪರಿಣಾಮ ಇಬ್ಬರು ಮೃತಪಟ್ಟಿದ್ದು, ಮಹಿಳೆ ಗಂಭೀರ ಗಾಯಗೊಂಡಿರುವ ಘಟನೆ ಹಳೆ ಹುಬ್ಬಳ್ಳಿಯ (Hubballi) ಅಯೋಧ್ಯಾ ನಗರದಲ್ಲಿ (Ayodhya Nagar) ನಡೆದಿದೆ.
ಮೋಹನ್ ಕಲಾಲ್ (40) ಮತ್ತು ಪ್ರವೀಣ್ ಕಲಾಲ್ (46) ಮೃತ ದುರ್ದೈವಿಗಳು. ಘಟನೆಯಲ್ಲಿ ಪ್ರವೀಣ್ ಕಲಾಲ್ ಸ್ಥಳದಲ್ಲಿಯೇ ಸಾವನ್ನಪ್ಪಿದರೇ, ಮೋಹನ್ ಕಲಾಲ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸುಮನ ಕಲಾಲ್ ಎಂಬ ಮಹಿಳೆ ಗಂಭೀರ ಗಾಯಗೊಂಡಿದ್ದಾರೆ. ಇದನ್ನೂ ಓದಿ: ರಿಯಾದ್ ಏರ್ಪೋರ್ಟ್ನಲ್ಲಿ ಬೆಂಕಿ, ದಟ್ಟ ಹೊಗೆ – ಸೌದಿ ಮೇಲೆ ಹೌತಿ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ
ಗ್ಯಾಸ್ ಲೀಕೇಜ್ನಿಂದ ಅಗ್ನಿ ಅವಘಡ ಸಂಭವಿಸಿದೆ ಎಂಬ ಮಾಹಿತಿ ತಿಳಿದುಬಂದಿದೆ. ಗಾಯಾಳು ಮಹಿಳೆಗೆ ಹುಬ್ಬಳ್ಳಿಯ ಕಿಮ್ಸ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತ ಪ್ರವೀಣ್ ಕಲಾಲ್ ಕೆಇಬಿಯಲ್ಲಿ ಕೆಲಸ ಮಾಡುತ್ತಿದ್ದರು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರು | ವ್ಹೀಲಿಂಗ್ ಪುಂಡಾಟಕ್ಕೆ ಟಿಟಿ ವಾಹನ ಪಲ್ಟಿ; ಓರ್ವ ಸಾವು, ಐವರಿಗೆ ಗಂಭೀರ ಗಾಯ

