ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದಿನಿಂದ ದಿನ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮುಂದಿನ 5 ದಿನ ಮಳೆ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಹಿನ್ನೆಲೆ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೀದರ್, ಗದಗ, ಹಾಸನ, ಬೆಳಗಾವಿ, ಧಾರವಾಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಹಾವೇರಿ, ಕೋಲಾರ, ಚಿಕ್ಕಬಳ್ಳಾಪುರ ಮತ್ತು ರಾಮನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಇರಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ.
ನಗರಗಳ ಹವಾಮಾನ ವರದಿ:
ಬೆಂಗಳೂರು: 29-21
ಮಂಗಳೂರು: 30-35
ಶಿವಮೊಗ್ಗ: 30-22
ಬೆಳಗಾವಿ: 29-21
ಮೈಸೂರು: 29-22
ಮಂಡ್ಯ: 29-22
ಮಡಿಕೇರಿ: 27-21
ರಾಮನಗರ: 30-32
ಹಾಸನ: 28-21
ಚಾಮರಾಜನಗರ: 29-22
ಚಿಕ್ಕಬಳ್ಳಾಪುರ: 29-21
ಕೋಲಾರ: 29-22
ತುಮಕೂರು: 29-21
ಉಡುಪಿ: 30-25
ಕಾರವಾರ: 30-27
ಚಿಕ್ಕಮಗಳೂರು: 29-21
ದಾವಣಗೆರೆ: 31-23
ಹುಬ್ಬಳ್ಳಿ: 31-22
ಚಿತ್ರದುರ್ಗ: 30-22
ಹಾವೇರಿ: 31-22
ಬಳ್ಳಾರಿ: 32-24
ಗದಗ: 31-22
ಕೊಪ್ಪಳ: 32-23
ರಾಯಚೂರು: 33-24
ಯಾದಗಿರಿ: 33-24
ವಿಜಯಪುರ: 31-23
ಕಲಬುರಗಿ: 32-24
ಬಾಗಲಕೋಟೆ: 32-23

