ವಿಜಯಪುರ: ವ್ಯಕ್ತಿಯೊಬ್ಬರ ಮೇಲೆ ಗುಂಡಿನ ದಾಳಿ ನಡೆದ ಘಟನೆ ಕೊಲ್ಹಾರ ತಾಲೂಕಿನ ಮಟ್ಯಾಳ ಗ್ರಾಮದಲ್ಲಿ ನಡೆದಿದೆ.
ಸುಖದೇವ ಎಂಬವರ ಮೇಲೆ ಸಂಗಪ್ಪ ಪೂಜಾರಿ ಎಂಬಾತ ಎರಡು ಸುತ್ತು ಗುಂಡಿನ ದಾಳಿ ನಡೆಸಿದ್ದಾನೆ. ಸುಖದೇವ್ ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಗುಂಡುಗಳು ತಾಗಿದ್ದು, ಗಾಯಗೊಂಡಿದ್ದಾರೆ. ಆತನನ್ನು ವಿಜಯಪುರದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಪಂಜಾಬ್ ಪೊಲೀಸ್ ಅಧಿಕಾರಿ ಹತ್ಯೆ ಪ್ರಕರಣ – ಎನ್ಕೌಂಟರ್ನಲ್ಲಿ ಆರೋಪಿ ಸಾವು
ಗುಂಡು ಹಾರಿಸಿದ ಬಳಿಕ ಆರೋಪಿ ಸಂಗಪ್ಪ ಪರಾರಿಯಾಗಿದ್ದಾನೆ. ಪರವಾನಿಗೆ ಹೊಂದಿದ ರಿವಾಲ್ವಾರ್ನಿಂದ ಗುಂಡು ಹಾರಿಸಲಾಗಿದೆ ಎಂದು ತಿಳಿದು ಬಂದಿದೆ. ದಾಳಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ದಾಳಿ ನಡೆದಿರುವ ಶಂಕೆ ವ್ಯಕ್ತವಾಗಿದೆ.
ಘಟನಾ ಸ್ಥಳಕ್ಕೆ ಕೊಲ್ಹಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಳಗಾವಿ | ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಬರ್ಬರ ಹತ್ಯೆಗೈದಿದ್ದ ಆರೋಪಿಗಳು ಅಂದರ್

