ಬೆಂಗಳೂರು: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತವಾಗಿದ್ದು, ಬೆಂಗಳೂರಿಗೆ ಮಳೆ (Bengaluru Rains) ಮುನ್ಸೂಚನೆ ಸಿಕ್ಕಿದ್ದು, ಇಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಸೆಪ್ಟೆಂಬರ್ 24ರವರೆಗೂ ರಾಜ್ಯದಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇಂದು 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಇಂದಿನಿಂದ 3 ದಿನ ವಿಶೇಷ ಅಧಿವೇಶನ – ಕಸ್ತೂರಿ ರಂಗನ್ ವರದಿ, ಬರದ ಬಗ್ಗೆ ಚರ್ಚೆ
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಗದ್, ಕೊಪ್ಪಳ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆಯಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.
ಬೆಂಗಳೂರಲ್ಲೂ ಮುಂದಿನ ನಾಲ್ಕು ದಿನಗಳ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಗಾಳಿಯು ಗಂಟೆಗೆ 30-40ಕಿಮೀ ವೇಗದಲ್ಲಿ ಬೀಸಲಿದೆ. ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಜೈಲಿನಲ್ಲಿ 5 ಸಜಾಬಂಧಿಗಳಿರುವ ಬ್ಯಾರಕ್‌ಗೆ ಪವಿತ್ರಾ ಗೌಡ ಶಿಫ್ಟ್; ಇಂದು ಜಾಮೀನು ಅರ್ಜಿ ವಿಚಾರಣೆ

