ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ (Electrocution) ರೈತ ಸಾವನ್ನಪ್ಪಿರುವ ಘಟನೆ ಶಿರಾ (Sira) ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ರಂಗಶಾಮಣ್ಣ (60) ಮೃತ ದುರ್ದೈವಿ. ರಂಗಶಾಮಣ್ಣ ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ರಂಗಶಾಮಣ್ಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ನಿರಂತರ ಕಾವೇರಿ ಹರಿವು – ಬರಿದಾಗುತ್ತಿವೆ ಜಲಾಶಯಗಳು
ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ವಿದ್ಯುತ್ ತಂತಿಗಳ ನಿರ್ವಹಣೆ ಹಾಗೂ ಸುರಕ್ಷತೆ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಂಗಾಳ ಉಪಮಹಾಸಾಗರದಲ್ಲಿ ವಾಯುಭಾರ ಕುಸಿತ – ಬೆಂಗಳೂರಿಗೆ ಸೇರಿ 10 ಜಿಲ್ಲೆಗಳಿಗೆ ಇಂದು ಯೆಲ್ಲೋ ಅಲರ್ಟ್

