ನವದೆಹಲಿ: ಪೊಲೀಸರ ಸೋಗಿನಲ್ಲಿ ಬಂದ ಮೂವರು ಅಪರಿಚಿತರು 17 ವರ್ಷದ ಬಾಲಕಿಯ (Crime) ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೆಹಲಿಯಲ್ಲಿ (Delhi) ನಡೆದಿದೆ.
ಸೋಮವಾರ ಸಂಜೆ 7 ಗಂಟೆ ಸುಮಾರಿಗೆ ಬಾಲಕಿ ತನ್ನ ಸ್ನೇಹಿತನೊಂದಿಗೆ ದೆಹಲಿಯ ಕಲ್ಕಾಜಿ ಮಂದಿರಕ್ಕೆ ಭೇಟಿ ನೀಡಿದ್ದ ವೇಳೆ ಈ ಘಟನೆ ನಡೆದಿದೆ.
ಕಲ್ಕಾಜಿ ಮಂದಿರದಲ್ಲಿ ದರ್ಶನ ಪಡೆದ ನಂತರ ಇಬ್ಬರೂ ಸಂಜೆ 7:30ರ ಸುಮಾರಿಗೆ ದೇವಾಲಯದ ಬಳಿಯ ಉದ್ಯಾನವನಕ್ಕೆ ತೆರಳಿದ್ದರು. ಈ ವೇಳೆ 25 ರಿಂದ 30 ವರ್ಷ ವಯಸ್ಸಿನ ಮೂವರು ಅಪರಿಚಿತರು ಅವರನ್ನು ಹಿಂಬಾಲಿಸಿಕೊಂಡು ಬಂದಿದ್ದಾರೆ. ಯುವಕರು ತಾವು ಪೊಲೀಸರೆಂದು ಹೇಳಿ ಇಬ್ಬರನ್ನು ಬೆದರಿಸಿ, ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ.
ದೆಹಲಿ ನಿವಾಸಿಯಾಗಿರುವ ಸಂತ್ರಸ್ತೆಯನ್ನ ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಗಿದೆ. ಆಕೆಯ ಹೇಳಿಕೆಯ ಆಧಾರದ ಮೇಲೆ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ಬೀದರ್ನಲ್ಲಿ 3 ಕಡೆ ಲೋಕಾಯುಕ್ತ ದಾಳಿ
ಆರೋಪಿಗಳ ಹುಡುಕಾಟದಲ್ಲಿರುವ ಪೊಲೀಸರು, ಘಟನೆ ನಡೆದ ಸುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಪೋಕ್ಸೊ ಕಾಯ್ದೆ ಸೇರಿದಂತೆ ಸಂಬಂಧಿತ ಕಾನೂನಿನ ನಿಬಂಧನೆಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ತಡರಾತ್ರಿ ಹುಬ್ಬಳ್ಳಿಯಲ್ಲಿ ಭೀಕರ ಅಪಘಾತ – ದಂಪತಿ ಸ್ಥಳದಲ್ಲೇ ಸಾವು

