– ಕಲಬುರಗಿ, ಹುಬ್ಬಳ್ಳಿ, ಮಡಿಕೇರಿಯಲ್ಲಿ ದಾಳಿ
– ಜೆಸ್ಕಾಂ ಎಇಇ ಮನೆಯಲ್ಲಿ 400ಗ್ರಾಂ ಚಿನ್ನ ಪತ್ತೆ
ಬೆಂಗಳೂರು: ಅಕ್ರಮ ಆಸ್ತಿ ಹೊಂದಿದವರಿಗೆ ಲೋಕಾಯುಕ್ತ ಬೆಳ್ಳಂಬೆಳಗ್ಗೆ ಶಾಕ್ ನೀಡಿದೆ. ಬೆಂಗಳೂರು, ಕಲಬುರಗಿ, ಹುಬ್ಬಳ್ಳಿ ಹಾಗೂ ಮಡಿಕೇರಿ ಸೇರಿದಂತೆ ಹಲವೆಡೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಹಲವೆಡೆ ಅಧಿಕಾರಿಗಳು ತಲಾಶ್ ನಡೆಸಿದ್ದಾರೆ.
ಎಲ್ಲೆಲ್ಲಿ ದಾಳಿ?
ಬೆಳ್ಳಂಬೆಳಗ್ಗೆ ಬೆಂಗಳೂರಿನ ನಿವೃತ್ತ ಬಿಬಿಎಂಪಿ ಎಇಇ ರಂಗನಾಥ್ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲಿಸಿದ್ದಾರೆ. ಇದನ್ನೂ ಓದಿ: ನಿಂತಿದ್ದ ಟ್ರ್ಯಾಕ್ಟರ್ಗೆ ಬೈಕ್ ಡಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಸಾವು
ಕಲಬುರಗಿ
ಜೆಸ್ಕಾಂ ಎಇಇ ರಾಜೇಶ್ವರಿ ಮನೆ ಮೇಲೆ ಲೋಕಾ ದಾಳಿ ನಡೆದಿದೆ. ಕಲಬುರಗಿ ನಗರದ ಮಹಾಲಕ್ಷ್ಮಿಲೇಔಟ್ನಲ್ಲಿರುವ ಮನೆ ಹಾಗೂ ಕಛೇರಿ ಮೇಲೆ ಏಕಕಾಲದಲ್ಲಿ ಲೋಕಾಯುಕ್ತ ದಾಳಿಯಾಗಿದೆ. ಇದುವರೆಗೂ 400ಗ್ರಾಂ ಚಿನ್ನ ಪತ್ತೆಯಾಗಿದೆ.
ಹುಬ್ಬಳ್ಳಿ
ಹೆಸ್ಕಾಂ ಎಇಇ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆದಿದೆ. ಹುಬ್ಬಳ್ಳಿ ಹೆಸ್ಕಾಂ ಕಚೇರಿಯಲ್ಲಿ ಎಇಇ ದಂಪತಿ ಕಿರಣ್ ಕುಮಾರ್- ಪ್ರೀತಿ ಕಾರ್ಯನಿರ್ವಹಿಸುತ್ತಿದ್ದಾರೆ. ಹುಬ್ಬಳ್ಳಿ ನಗರದ ಅಕ್ಷಯ ಕಾಲೋನಿಯಲ್ಲಿರುವ ಮನೆ, ಕಚೇರಿ ಸೇರಿ ಒಟ್ಟು ನಾಲ್ಕು ಕಡೆ ದಾಳಿ ನಡೆಸಲಾಗಿದೆ. ಧಾರವಾಡ ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಅಧಿಕಾರಿಗಳು ದಾಖಲಾತಿಗಳ ಪರಿಶೀಲನೆ ನಡೆಸುತ್ತಿದ್ದಾರೆ. ಈಗಾಗಲೇ ಅಪಾರ ಪ್ರಮಾಣದ ನಗದು, ಬಂಗಾರ, ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ. ಇದನ್ನೂ ಓದಿ: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಶಾಕ್ – ಬೀದರ್ನಲ್ಲಿ 3 ಕಡೆ ಲೋಕಾಯುಕ್ತ ದಾಳಿ
ಮಡಿಕೇರಿ
ಮಡಿಕೇರಿಯಲ್ಲಿ ಸಾರ್ವಜನಿಕರಿಂದ ಬಂದ ದೂರಿನ ಹಿನ್ನೆಲೆಯಲ್ಲಿ ನಗರಸಭೆ ಪೌರಾಯುಕ್ತ ರಮೇಶ್ ನಿವಾಸ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದಲ್ಲಿ ದಾಳಿ ನಡೆದಿದೆ.

