ಬೆಂಗಳೂರು: ರಾಜ್ಯದಲ್ಲಿ ಮುಂದಿನ 3 ದಿನ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಸೆ.23ರಂದು ಉತ್ತರ ಒಳನಾಡಿನಲ್ಲಿ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಭಾರೀ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ. ಸೆ.23 ಮತ್ತು 24ರಂದು ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: 220 ಔಷಧಗಳು ನಕಲಿ – ಡ್ರಗ್ ಕಂಟ್ರೋಲ್ ರಿಪೋರ್ಟ್‌ನಲ್ಲಿ ಬೆಚ್ಚಿಬೀಳಿಸುವ ಮಾಹಿತಿ
ಸೆ.24ರಂದು ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸೆ.22 ಮತ್ತು 25ರಂದು ಕರಾವಳಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಇಂದಿನಿಂದ ಸೆ.24ರವರೆಗೆ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಸೆ.26ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಮುನ್ಸೂಚನೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಇದನ್ನೂ ಓದಿ: ಲೇಡಿ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಕ್ಷಮೆಯಾಚಿಸಿದ ಶಾಸಕ ಸುರೇಶ್‌ಗೌಡ ಪುತ್ರಿ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆಯಿದ್ದು, ಗುಡುಗು, ಮಿಂಚು ಸಹಿತ ಮಳೆ ಹಾಗೂ ಬಿರುಗಾಳಿ ಬೀಸುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಇದನ್ನೂ ಓದಿ: ಪಶುವೈದ್ಯಾಧಿಕಾರಿ ಹುದ್ದೆಗಳಿಗೆ ಡೀಲಿಂಗ್ – ಸರ್ಕಾರಕ್ಕೆ ಸಿಐಡಿ ತನಿಖಾ ವರದಿ ಸಲ್ಲಿಕೆ
ಇಂದು ಬೆಂಗಳೂರು ನಗರದಲ್ಲಿ ಬೆಳ್ಳಂಬೆಳಗ್ಗೆ ಜಿಟಿಜಿಟಿ ಮಳೆ ನಡುವೆ ಚಳಿಯ ವಾತಾವರಣ ನಿರ್ಮಾಣವಾಗಿದೆ. ಮುಂದಿನ ಮೂರ್ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ನಿಂತಿದ್ದ ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ – ರಜೆ ಮೇಲೆ ಊರಿಗೆ ಬಂದಿದ್ದ ಐಟಿಬಿಪಿ ಯೋಧ ಸಾವು

