ಬೆಂಗಳೂರು: ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Kempegowda International Airport) ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ.
ಬ್ಯಾಂಕಾಂಕ್‌ನಿಂದ ಬೆಂಗಳೂರಿಗೆ (Bengaluru) ಬರುತ್ತಿದ್ದ ಪ್ರಯಾಣಿಕರನ್ನು ತಪಾಸಣೆ ನಡೆಸಿದಾಗ 12.57 ಕೋಟಿ ರೂ. ಮೌಲ್ಯದ 36 ಕೆ.ಜಿ ಹೈಡ್ರೋ ಗಾಂಜಾ ಪತ್ತೆಯಾಗಿದೆ. ಸದ್ಯ ಪತ್ತೆಯಾದ ಹೈಡ್ರೋ ಗಾಂಜಾವನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಬಿಜೆಪಿ ನಾಯಕರನ್ನ ರಣಹದ್ದು ಎಂದ ಸಚಿವ ಯತೀಂದ್ರ ವಿರುದ್ಧ ದೂರು
ಸದ್ಯ ಕಳ್ಳಸಾಗಣೆ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು NDPS ಕಾಯ್ದೆಯಡಿ ಬಂಧಿಸಿ, ಕಸ್ಟಮ್ಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ. ಈ ಹಿಂದೆ 15.3 ಕೆಜಿ ಹೈಡ್ರೋಪೋನಿಕ್ ಗಾಂಜಾವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದರು. ಈ ಪೈಕಿ ಎರಡು ಪ್ರಕರಣಗಳಲ್ಲಿ ಒಟ್ಟು 36 ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

