ಮೈಸೂರು: ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದ ಘಟನೆ ಮೈಸೂರು (Mysuru) ಜಿಲ್ಲೆಯ ನಂಜನಗೂಡಿನ (Nanjanagudu) ಜೆಎಸ್ಎಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ನಡೆದಿದೆ.
19 ವರ್ಷದ ಪ್ರಿತೇಶ್ ಜೈನ್ ಮೃತ ವಿದ್ಯಾರ್ಥಿ. ಕೋರ್ಸ್ ಪೂರ್ಣಗೊಳಿಸಿ ಉದ್ಯೋಗಕ್ಕೂ ಆಯ್ಕೆಯಾಗಿದ್ದ. ನೇಮಕಾತಿ ಪ್ರಮಾಣಪತ್ರ ಪಡೆಯಲು ಕಾಲೇಜಿಗೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಇದನ್ನೂ ಓದಿ: ರೈಲಿನಲ್ಲಿ ಅಕ್ರಮ ಗಾಂಜಾ ಸಾಗಾಟ – ಆರೋಪಿ ವಶಕ್ಕೆ, 5 ಲಕ್ಷ ರೂ. ಮೌಲ್ಯದ 10 ಕೆಜಿ ಗಾಂಜಾ ಸೀಜ್
ಕಾಲೇಜು ಮುಂಭಾಗದಲ್ಲಿ ರಸ್ತೆ ಬದಿ ನಿಂತಿದ್ದ ವಿದ್ಯಾರ್ಥಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಕಾರು ಚಾಲಕ ವಾಹನವನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.
ಅಪಘಾತದ ಭೀಕರ ದೃಶ್ಯ ಹಿಂಬದಿಯಲ್ಲಿ ಬರುತ್ತಿದ್ದ ಕಾರಿನ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರು ಬೆಂಗಳೂರು ನೋಂದಣಿಯ ಕಾರನ್ನು ವಶಕ್ಕೆ ಪಡೆದಿದ್ದಾರೆ.ಇದನ್ನೂ ಓದಿ: ಕರ್ನಾಟಕ ಸೇರಿ 28 ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ: ಅ.23ರಂದು ಮತದಾನ

