ದಾವಣಗೆರೆ: ಕಾಂಗ್ರೆಸ್ (Congress) ನೂತನ ಜಿಲ್ಲಾಧ್ಯಕ್ಷರ ವಿರುದ್ಧ ದಾವಣಗೆರೆಯಲ್ಲಿ (Davanagere) ತೀವ್ರ ಅಸಮಾಧಾನ ಭುಗಿಲೆದ್ದಿದೆ. ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿರುವ ಕಾರ್ಯಕರ್ತರು ಜಿಲ್ಲಾಧ್ಯಕ್ಷನ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.
ಇಬ್ರಾಹಿಂ ಖಲೀಲ್ ಉಲ್ಲಾ ಅವರನ್ನು ಜಿಲ್ಲಾದ್ಯಕ್ಷರನ್ನಾಗಿ ಎಐಸಿಸಿ ನೇಮಕ ಮಾಡಿದೆ. ಇದಕ್ಕೆ ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದು, ಪಕ್ಷಕ್ಕೆ ದುಡಿದ ನಿಜವಾದ ಕಾರ್ಯಕರ್ತರನ್ನು ಪಕ್ಷ ಕಡೆಗಣಿಸಿದೆ. ಜಿಲ್ಲಾಧ್ಯಕ್ಷರ ನೇಮಕವನ್ನು ಮರು ಪರಿಶೀಲಿಸಬೇಕು ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಸರ್ಕಾರದ ವಿರುದ್ಧ ಬಿಜೆಪಿಯಿಂದ ‘ನಮ್ಮ ಮನೆ, ನಮ್ಮ ಹಕ್ಕು’ ಜನಾಗ್ರಹ ಆಂದೋಲನ
ಜಿಲ್ಲೆಯ ಸಚಿವರು, ಶಾಸಕರು ಹಾಗೂ ಮುಖಂಡರ ಗಮನಕ್ಕೆ ಬಾರದೇ ಜಿಲ್ಲಾಧ್ಯಕ್ಷರನ್ನು ನೇಮಿಸಲಾಗಿದೆ. ಸ್ಥಳೀಯವಾಗಿ ಪಕ್ಷದ ಬಾವುಟ ಕಟ್ಟಿ ಪಕ್ಷಕ್ಕಾಗಿ ಹೋರಾಟ ಮಾಡಿದವರನ್ನು ಜಿಲ್ಲಾಧ್ಯಕ್ಷರನ್ನಾಗಿ ಮಾಡಬೇಕು. ಲಾಬಿ ನಡೆಸಿ ಜಿಲ್ಲಾಧ್ಯಕ್ಷರಾಗಿರುವ ಅನುಮಾನ ಇದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ದಾವಣಗೆರೆ ಜಿಲ್ಲೆಯ ಅಧ್ಯಕ್ಷ ಸ್ಥಾನದ ವೀಕ್ಷಕರಾಗಿದ್ದ ರಾಹುಲು ಬಾಲ ಅವರು ಜಿಲ್ಲೆಯ ಕಾಂಗ್ರೆಸ್ ಮುಖಂಡರ ಹಾಗೂ ಅಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿದ್ದರು. ಅದರೂ ಕೂಡ ಜಿಲ್ಲಾಧ್ಯಕ್ಷರಾಗಿ ಮಹಮ್ಮದ್ ಖಲೀಲ್ ವುಲ್ಲಾ ಅವರನ್ನು ನೇಮಕ ಮಾಡಲಾಗಿದೆ. ಜಿಲ್ಲೆಯಲ್ಲಿ ನೂತನ ಜಿಲ್ಲಾಧ್ಯಕ್ಷರು ಇಲ್ಲಿ ಕೆಲಸ ಮಾಡಿಲ್ಲ ಎಂದು ಪಕ್ಷದ ಕಾರ್ಯಕರ್ತರು ಆರೋಪಿಸಿದ್ದಾರೆ. ಇದನ್ನೂ ಓದಿ: ಕೊಡೋದಕ್ಕೆ ಹಣ ಇಲ್ಲ, ಸಿಎಂ ಪುಗ್ಸಟ್ಟೆ ಘೋಷಣೆ ಮಾಡ್ಕೊಂಡು ಹೊರಟಿದ್ದಾರೆ: ವಿಜಯೇಂದ್ರ ಕಿಡಿ

