– ಬರಪಟ್ಟಿಗೆ 29 ಹೆಚ್ಚುವರಿ ತಾಲೂಕುಗಳ ಸೇರ್ಪಡೆ
ಬೆಂಗಳೂರು: ಬರಪಟ್ಟಿಯಿಂದ ಇಂಡಿ, ಚಡಚಣ ತಾಲೂಕು ಕೈಬಿಟ್ಟಿದ್ದಕ್ಕೆ ಬೆಸರಗೊಂಡು ಶಾಸಕ ಸ್ಥಾನಕ್ಕೆ ಯಶವಂತರಾಯ ಗೌಡ ಪಾಟೀಲ್ ರಾಜೀನಾಮೆ ನೀಡಿದ ಬೆನ್ನಲ್ಲೇ ಇಂಡಿ (Indi) ತಾಲೂಕನ್ನು ಬರಪಟ್ಟಿಗೆ (Droght Hit Area) ಸೇರಿಸಿ ಸರ್ಕಾರ ನೋಟೀಫಿಕೇಷನ್ ಹೊರಡಿಸಿದೆ.
ಬರಗಾಲ ಪೀಡಿತ ಪಟ್ಟಿಯಿಂದ ವಿಜಯಪುರ (Vijayapura) ಜಿಲ್ಲೆಯ ಇಂಡಿ, ಚಡಚಣ ತಾಲೂಕು ಕೈಬಿಟ್ಟ ಹಿನ್ನೆಲೆ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಬುಧವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹಲವು ಬಾರಿ ಮನವಿ ಮಾಡಿದರೂ ಇಂಡಿ ಹಾಗೂ ಚಡಚಣ ತಾಲೂಕು ಬರ ಘೋಷಣೆ ಆಗಿಲ್ಲ. ನಮ್ಮ ಮಾತಿಗೆ, ನಮ್ಮ ಭಾವನೆಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಬೇಸರಗೊಂಡು ಸ್ಪೀಕರ್ ಅವರನ್ನ ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದರು. ಆದರೆ ಅವರ ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿರಲಿಲ್ಲ. ಇದನ್ನೂ ಓದಿ: ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ರಾಜೀನಾಮೆ
ಶಾಸಕರ ರಾಜೀನಾಮೆ ಕುರಿತು ಸದನದಲ್ಲಿ ಚರ್ಚೆ ನಡೆದಿತ್ತು. ಬೆನ್ನಲ್ಲೇ ಸ್ಥಳ ಸತ್ಯಶೋಧನಾ ವರದಿ ಆಧರಿಸಿ 29 ಹೆಚ್ಚುವರಿ ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದೆ. 29 ತಾಲೂಕುಗಳ ಪೈಕಿ ಇಂಡಿ ತಾಲೂಕು ಕೂಡ ಬರಪಟ್ಟಿಗೆ ಸೇರ್ಪಡೆಗೊಂಡಿದೆ. ಇದನ್ನೂ ಓದಿ: ಅಂಬಾನಿಯನ್ನ ಹಿಂದಿಕ್ಕಿದ ಅದಾನಿ – ದೇಶದ ನಂ. 1 ಶ್ರೀಮಂತ
29 ಹೆಚ್ಚುವರಿ ತಾಲೂಕು ಯಾವುದು?
ಔರಾದ್, ಗೋಕಾಕ್, ರಾಮದುರ್ಗ, ಸವದತ್ತಿ, ಕಾಗವಾಡ, ಇಂಡಿ, ಚಡಚಣ, ಕಲಘಟಗಿ, ಕುಂದಗೋಳ, ಅಳ್ನಾವರ, ಶಿಕಾರಿಪುರ, ಶಿವಮೊಗ್ಗ, ಭದ್ರಾವತಿ, ಸೊರಬ, ತೀರ್ಥಹಳ್ಳಿ, ಚಿಕ್ಕಮಗಳೂರು, ಕಳಸ, ಮಡಿಕೇರಿ, ಕುಶಾಲನಗರ, ಬೆಳ್ತಂಗಡಿ, ಬಂಟ್ವಾಳ, ಉಳ್ಳಾಲ, ಉಡುಪಿ, ಬೈಂದೂರು, ಅಂಕೋಲಾ, ಭಟ್ಕಳ, ಹಳಿಯಾಳ, ಶಿರಸಿ ತಾಲೂಕುಗಳನ್ನು ಬರಪಟ್ಟಿಗೆ ಸೇರ್ಪಡಿಸಲಾಗಿದೆ. ಇದನ್ನೂ ಓದಿ: ಓಮನ್ ಕರಾವಳಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ದಾಳಿ – ಭಾರತೀಯ ನಾವಿಕ ಸಾವು, 19 ಮಂದಿಯ ರಕ್ಷಣೆ

