– ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ ಪ್ರಧಾನಿ
ನವದೆಹಲಿ: ಗ್ರೇಟರ್ ನೋಯ್ಡಾದಲ್ಲಿ (Greater Noida) ಸ್ಲೀಪರ್ ಬಸ್ಗೆ ಬೆಂಕಿ (Sleeper Bus Fire) ಹೊತ್ತಿಕೊಂಡು 9 ಮಂದಿ ಸಜೀವ ದಹನಗೊಂಡ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ.
ಈ ಕುರಿತು ಪ್ರಧಾನಿ ಕಚೇರಿ ಎಕ್ಸ್ನಲ್ಲಿ ಮಾಹಿತಿ ಹಂಚಿಕೊಂಡಿದೆ. ಗ್ರೇಟರ್ ನೋಯ್ಡಾದಲ್ಲಿ ಬಸ್ಗೆ ಬೆಂಕಿ ಹೊತ್ತಿಕೊಂಡು ಜೀವಹಾನಿಯಾಗಿರುವ ಸುದ್ದಿ ದುಃಖ ತಂದಿದೆ. ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸುವುದಾಗಿ ಹಾಗೂ ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಪ್ರಾರ್ಥಿಸುವುದಾಗಿ ತಿಳಿಸಿದೆ. ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೂಡ ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಬಿ.ಟೆಕ್ ಅರ್ಧಕ್ಕೆ ನಿಲ್ಲಿಸಿ ಕಳ್ಳತನ ವೃತ್ತಿ, ಬಾಂಗ್ಲಾದಲ್ಲಿ ಪೌರತ್ವ, – ಬೆಂಗಳೂರಿಗೆ ಕಾಲಿಟ್ಟು ಪೊಲೀಸ್ ಅತಿಥಿಯಾದ ಹೈಫೈ ಖದೀಮ!

ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದ ಯಮುನಾ ಎಕ್ಸ್ಪ್ರೆಸ್ವೇಯಲ್ಲಿ ಚಲಿಸುತ್ತಿದ್ದಾಗಲೇ ಸ್ಲೀಪರ್ ಬಸ್ನಲ್ಲಿ ಭಾರೀ ಬೆಂಕಿ ಹೊತ್ತಿಕೊಂಡ ಪರಿಣಾಮ 9 ಮಂದಿ ಸಜೀವ ದಹನವಾಗಿದ್ದಾರೆ. ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಕೆಲವರು ಪ್ರಾಣ ಉಳಿಸಿಕೊಳ್ಳಲು ಚಲಿಸುತ್ತಿದ್ದ ಬಸ್ನಿಂದಲೇ ಜಿಗಿದಿದ್ದಾರೆ. ಘಟನೆ ವೇಳೆ ಸ್ಲೀಪರ್ ಬಸ್ನಲ್ಲಿ ಸುಮಾರು 40 ರಿಂದ 50 ಮಂದಿ ಪ್ರಯಾಣಿಕರು ಇದ್ದರು. ಏಕಾಏಕಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದ್ದು, ಬೆಂಕಿ ವೇಗವಾಗಿ ಇಡೀ ಬಸ್ಗೆ ಆವರಿಸಿಕೊಂಡಿದೆ. ಪ್ರಾಣ ಉಳಿಸಿಕೊಳ್ಳಲು ಕೆಲವರು ಚಲಿಸುತ್ತಿದ್ದ ಬಸ್ನಿಂದ ಹೊರಕ್ಕೆ ಜಿಗಿದಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ – CWMA ಆದೇಶ ಪಾಲಿಸಲು ಸುಪ್ರೀಂ ಸೂಚನೆ; ಅ.12ಕ್ಕೆ ವಿಚಾರಣೆ ಮುಂದೂಡಿಕೆ
ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳೀಯ ಪೊಲೀಸರೊಂದಿಗೆ ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಜೆವಾರ್ ಟೋಲ್ ಪ್ಲಾಜಾದಲ್ಲಿ ನಿಯೋಜಿಸಲಾಗಿದ್ದ ರಕ್ಷಣಾ ವಾಹನ ಹಾಗೂ ಅಗ್ನಿಶಾಮಕ ವಾಹನ ಕೂಡ ಸ್ಥಳಕ್ಕೆ ತಲುಪಿದೆ. ಇದರ ಜೊತೆಗೆ ನಾಲ್ಕು ಹೆಚ್ಚುವರಿ ಅಗ್ನಿಶಾಮಕ ವಾಹನಗಳು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ಸಂಪೂರ್ಣವಾಗಿ ನಂದಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಹಾಲಿನ ದರ 4-5 ರೂ. ಹೆಚ್ಚಳ ಫಿಕ್ಸ್
ಪ್ರಾಥಮಿಕ ತನಿಖೆಯ ಪ್ರಕಾರ, ಬಸ್ನ ಹವಾನಿಯಂತ್ರಣ ವ್ಯವಸ್ಥೆಯಲ್ಲಿ ಉಂಟಾದ ಸ್ಪಾರ್ಕ್ ಅಥವಾ ಸ್ಫೋಟದಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ. ಈ ವೇಳೆ ಎಂಜಿನ್ನ ಲೂಬ್ರಿಕೇಟಿಂಗ್ ಆಯಿಲ್ಗೆ ಬೆಂಕಿ ತಗುಲಿ, ಕ್ಷಣಾರ್ಧದಲ್ಲಿ ಬಸ್ನಾದ್ಯಂತ ಬೆಂಕಿ ಹರಡಿರಬಹುದು ಎಂದು ಅಧಿಕಾರಿಗಳು ಶಂಕಿಸಿದ್ದಾರೆ. ಇದನ್ನೂ ಓದಿ: ಮಸೀದಿ ಮುಂದೆ ಬಂದ ಗಣೇಶ ಮೆರವಣಿಗೆ ಸ್ವಾಗತ – ಭಾವೈಕ್ಯತೆ ಮೆರೆದ ಮುಸ್ಲಿಂ ಬಾಂಧವರು
ಘಟನೆಗೆ ಸಂಬಂಧಿಸಿದಂತೆ ಬಸ್ನ ಚಾಲಕ ಹಾಗೂ ನಿರ್ವಾಹಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದಾಗಲೇ ಸ್ಲೀಪರ್ ಬಸ್ನಲ್ಲಿ ಬೆಂಕಿ – 9 ಮಂದಿ ಸಜೀವ ದಹನ

