ತುಮಕೂರು: 30 ಸಾವಿರ ಲಂಚ (Bribe) ಸ್ವೀಕರಿಸುವಾಗ ಕಂದಾಯ ನಿರೀಕ್ಷಕ (Revenue Inspector) ಲೋಕಾಯುಕ್ತ (Lokayukta) ಬಲೆಗೆ ಬಿದ್ದ ಘಟನೆ ತುಮಕೂರು (Tumakuru) ಜಿಲ್ಲೆ ಮಧುಗಿರಿ (Madhugiri) ತಾಲೂಕಿನಲ್ಲಿ ನಡೆದಿದೆ.
ಮುದ್ದೇನಹಳ್ಳಿ ಗ್ರಾಮದ ರೇಣುಕೇಶ್ ಪೌತಿ ಖಾತೆ ಮಾಡಿಸಲು ಅರ್ಜಿ ಸಲ್ಲಿಸಿದ್ದರು. ಈ ವೇಳೆ ಮಧುಗಿರಿ ಕಸಬಾ ಕಂದಾಯ ನಿರೀಕ್ಷಕ ನಾಗೇಶ್ 1 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು. ಮೊದಲ ಕಂತಾಗಿ 35 ಸಾವಿರ ರೂ. ನೀಡಲಾಗಿತ್ತು. ಎರಡನೇ ಕಂತಿನ 30 ಸಾವಿರ ರೂ. ಸ್ವೀಕರಿಸುವ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಜಗಳ ಬಿಡಿಸಲು ಬಂದಿದ್ದವನಿಗೆ ಚಾಕು ಇರಿತ – ಚಿಕಿತ್ಸೆ ಫಲಕಾರಿಯಾಗದೇ ವ್ಯಕ್ತಿ ಸಾವು
ಲೋಕಾಯುಕ್ತ ಎಸ್‌ಪಿ ಮಲ್ಲೇಶ್ ನೇತೃತ್ವದಲ್ಲಿ ಪಿಐಗಳಾದ ರಾಜು, ನಿರ್ಮಲಾದೇವಿ ಹಾಗೂ ಶಾಂತಿನಾಥ್ ಹೊನ್ನೂರು ಸೇರಿದಂತೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ. ಇದನ್ನೂ ಓದಿ: ಕರ್ನಾಟಕಕ್ಕೆ ಮತ್ತೆ ಕಾವೇರಿ ಆಘಾತ; ತಮಿಳುನಾಡಿಗೆ ನಿತ್ಯ 4 ಸಾವಿರ ಕ್ಯೂಸೆಕ್ ನೀರು ಹರಿಸಲು ಸೂಚನೆ

